Thursday, May 26, 2022
spot_img
Homeಜಿಲ್ಲಾಟೊಮೆಟೋ ಜ್ವರ : ಜಿಲ್ಲೆಯಲ್ಲಿ ಕಟ್ಟೆಚ್ಚರ

ಟೊಮೆಟೋ ಜ್ವರ : ಜಿಲ್ಲೆಯಲ್ಲಿ ಕಟ್ಟೆಚ್ಚರ

ಉಡುಪಿ : ಕೇರಳದಲ್ಲಿ ಮಕ್ಕಳಿಗೆ ಟೊಮೆಟೋ ಜ್ವರ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್‌ ತಿಳಿಸಿದರು.
ಇದುವರೆಗೆ ಜಿಲ್ಲೆಯಲ್ಲಿ ಟೊಮೆಟೋ ಜ್ವರದ ಲಕ್ಷಣಗಳು ಪತ್ತೆಯಾಗಿಲ್ಲ. ಕೇರಳ ಗಡಿಭಾಗಗಳವರೆಗೆ ಜ್ವರ ಪ್ರಕರಣಗಳು ಪತ್ತೆಯಾದ ಕಾರಣ ಗಡಿಭಾಗದ ಜಿಲ್ಲೆಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ. ಈ ಜ್ವರಕ್ಕೂ ಕೊರೊನಾಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದರು.

ರೋಗ ಲಕ್ಷಣಗಳು
ಜ್ವರ ಕಾಣಿಸಿಕೊಳ್ಳುವ ಮಕ್ಕಳ ದೇಹದಲ್ಲಿ ಟೊಮೆಟೋ ಆಕಾರದ ಗುಳ್ಳೆಗಳು ಕಾಣಿಸಿಕೊಂಡು, ಜ್ವರ, ಕೆಮ್ಮು, ಶೀತ, ನಿರ್ಜಲೀಕರಣ ಉಂಟಾಗುತ್ತದೆ. ಒಬ್ಬರಿಂದ ಇನ್ನೊಬ್ಬರಿಗೆ ಜ್ವರ ಹರಡುವುದರಿಂದ ಸೋಂಕಿತ ಮಕ್ಕಳು ಕ್ವಾರಂಟೈನ್‌ ಆಗಬೇಕು ಮತ್ತು ಗುಳ್ಳೆಗಳನ್ನು ಉಜ್ಜಬಾರದು. ಆಗಾಗ ನೀರು ಕುಡಿಯುತ್ತಿರಬೇಕು.

ಖಾಸಗಿ ಆಸ್ಪತ್ರೆಗಳು ಹಾಗೂ ಎಲ್ಲಾ ಮಕ್ಕಳ ತಜ್ಞರು ಟೊಮೆಟೋ ಜ್ವರದ ಲಕ್ಷಣ ಕಂಡುಬಂದಲ್ಲಿ ಪರೀಕ್ಷೆ ನಡೆಸಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಕೇರಳದಿಂದ ಬರುವ ವ್ಯಕ್ತಿಗಳು, ಯಾತ್ರಿಕರು, ಮಕ್ಕಳ ಬಗ್ಗೆ ನಿಗಾ ವಹಿಸಬೇಕು. ಸಾರ್ವಜನಿಕರು ಯಾವುದೇ ಭೀತಿಗೆ ಒಳಗಾಗದೇ ಮುನ್ನೆಚ್ಚರಿಕೆ ವಹಿಸಬೇಕು. ಸ್ವಚ್ಚತೆಯನ್ನು ಕಾಯ್ದುಕೊಳ್ಳಬೇಕು ಎಂದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!