ನವದೆಹಲಿ : ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇಬ್ ಮೇ.14 ರಂದು ರಾಜೀನಾಮೆ ನೀಡಿದ್ದು ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರನ್ನು ನೇಮಕ ಮಾಡಲಾಗಿದೆ ಮತ್ತು ರಾಜ್ಯಸಭಾ ಸದಸ್ಯ ಮಾಣಿಕ್ ಸಹಾ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಡಾ. ಮಾಣಿಕ್ ಸಹಾ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು ಎಂದು ನಿರ್ಗಮಿತ ಮುಖ್ಯಮಂತ್ರಿ ಟ್ವೀಟ್ ಮಾಡಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿ ಮತ್ತು ಮಾಣಿಕ ಸಹಾ ನಾಯಕತ್ವದಲ್ಲಿ ತ್ರಿಪುರಾ ಅಭಿವೃದ್ಧಿ ಹೊಂದುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ದೇಬ್ ಹೇಳಿದ್ದಾರೆ.
Recent Comments
ಕಗ್ಗದ ಸಂದೇಶ
on