Tuesday, May 17, 2022
spot_img
Homeಸ್ಥಳೀಯ ಸುದ್ದಿಮೇ 18 : ಮೆಸ್ಕಾಂ ವಿಭಾಗೀಯ ಕಚೇರಿ ಉದ್ಘಾಟನೆ

ಮೇ 18 : ಮೆಸ್ಕಾಂ ವಿಭಾಗೀಯ ಕಚೇರಿ ಉದ್ಘಾಟನೆ

ಕಾರ್ಕಳ : ಮೆಸ್ಕಾಂ ಉಪವಿಭಾಗದ ಕಚೇರಿ ಬಳಿ ಮೇ 18ರಂದು ಮೆಸ್ಕಾಂ ವಿಭಾಗೀಯ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ 10 ಗಂಟೆಗೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.‌ ಅಂಗಾರ ನೂತನ ಕಚೇರಿ ಉದ್ಘಾಟಿಸುವರು. ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್‌ ಕುಮಾರ್‌ ಅ‍ಧ್ಯಕ್ಷತೆ ವಹಿಸಲಿದ್ದು, ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್‌ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ರಘುಪತಿ ಭಟ್‌, ಲಾಲಾಜಿ ಮೆಂಡನ್‌, ಹಾಲಾಡಿ ಶ್ರೀನಿವಾಸ್‌ ಶೆಟ್ಟಿ, ಆಯನೂರು ಮಂಜುನಾಥ, ಡಾ. ತೇಜಸ್ವಿನಿ ಗೌಡ, ಎಸ್.ಎಲ್.‌ ಭೋಜೆಗೌಡ, ಮಂಜುನಾಥ್‌ ಭಂಡಾರಿ, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ. ಮಣಿರಾಜ ಶೆಟ್ಟಿ ಮತ್ತು ಪುರಸಭಾ ಅಧ್ಯಕ್ಷೆ ಸುಮಾ ಕೇಶವ್‌, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್‌, ಕ.ವಿ.ಪ್ರ.ನಿ.ನಿ. ವ್ಯವಸ್ಥಾಪಕ ನಿರ್ದೇಶಕಿ ಡಾ. ಎನ್.‌ ಮಂಜುಳ, ಕಾರ್ಮಿಕ ಇಲಾಖೆಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಜೈನ್‌, ಜಿಲ್ಲಾಧಿಕಾರಿ ಕೂರ್ಮರಾವ್‌, ಸಿಇಒ ಪ್ರಸನ್ನ ಎಚ್.‌, ಜಿಲ್ಲಾ ಪೋಲಿಸ್‌ ಅಧೀಕ್ಷಕ ವಿಷ್ಣುವರ್ಧನ್‌ ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!