ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಐವರ ಹೆಸರನ್ನು ರಾಜ್ಯಸಭೆಗೆ ಮತ್ತು ಬಿ. ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಸೇರಿದಂತೆ 20 ಹೆಸರನ್ನು ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಕೋರ್ ಕಮಿಟಿ ಶಿಫಾರಸು ಮಾಡಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಡಿ.ವಿ. ಸದಾನಂದಗೌಡ ಮತ್ತಿತರರು ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಂಡಿದ್ದರು.
ರಾಜ್ಯಸಭಾ ಚುನಾವಣೆ : ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ಮತ್ತೆ ಕಣಕ್ಕೆ
