Sunday, July 3, 2022
spot_img
Homeರಾಜ್ಯಬೆಂಗಾಲಿ ಕಿರುತೆರೆ ನಟಿ ಪಲ್ಲವಿ ಡೇ ಫ್ಲಾಟ್‌ನಲ್ಲಿ ಶವವಾಗಿ ಪತ್ತೆ

ಬೆಂಗಾಲಿ ಕಿರುತೆರೆ ನಟಿ ಪಲ್ಲವಿ ಡೇ ಫ್ಲಾಟ್‌ನಲ್ಲಿ ಶವವಾಗಿ ಪತ್ತೆ

ಕೋಲ್ಕತ್ತಾ : ಜನಪ್ರಿಯ ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಅವರು ಮೇ.15 ರಂದು ಬೆಳಗ್ಗೆ ಕೋಲ್ಕತ್ತಾದ ಗರ್ಫಾ ಪ್ರದೇಶದಲ್ಲಿನ ತಮ್ಮ ಫ್ಲಾಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಪ್ರಾಥಮಿಕ ತನಿಖೆಯ ನಂತರ ಯುವ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 20ರ ಹರೆಯದ ಪಲ್ಲವಿ ತನ್ನ ಮನೆಯಲ್ಲಿ ಸೀಲಿಂಗ್ ಫ್ಯಾನ್‌ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕೂಡಲೇ ಆಕೆಯನ್ನು ಬಂಗೂರ್ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಪಲ್ಲವಿ ಡೇ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!