ಉಡುಪಿ : ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೇ 17ರಿಂದ 19ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 18ರಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ವಿಪತ್ತು ನಿರ್ವಹಣೆಗಾಗಿ ಮುಂಜಾಗೃತಾ ಕ್ರಮ ಕೈಗೊಂಡಿದೆ. ಸಾರ್ವಜನಿಕರು, ಮೀನುಗಾರರು ನದಿ, ಸಮುದ್ರಕ್ಕೆ ಇಳಿಯದಂತೆ, ಸಾರ್ವಜನಿಕ ಸ್ಥಳದಲ್ಲಿರುವಂತಹ ಅಪಾಯಕಾರಿ ಮರಗಳ ಕೆಳಗೆ, ವಿದ್ಯುತ್ ಕಂಬ, ಕಟ್ಟಡದ ಕೆಳಗೆ ಮತ್ತು ನೆರೆಪೀಡಿತ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ತಿಳಿಸಿದೆ.
Recent Comments
ಕಗ್ಗದ ಸಂದೇಶ
on