ಬೆಂಗಳೂರು : ಫ್ರೀಡಂಪಾರ್ಕ್‌ ನಲ್ಲಿ ಆಶಾ ಕಾರ್ಯಕರ್ತೆಯರಿಂದ ಬೃಹತ್‌ ಪ್ರತಿಭಟನೆ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರಕಾರಕ್ಕೆ 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಎಐಯುಟಿಯುಸಿ ನೇತೃತ್ವದಲ್ಲಿ ಫ್ರೀಡಂ ಪಾರ್ಕ್‌ ನಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು. ವಿವಿಧ ಜಿಲ್ಲೆಗಳಿಂದ ಆಶಾ ಕಾರ್ಯಕರ್ತೆಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. 15 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು ಕೊರೊನಾ ಸಂದರ್ಭದಲ್ಲಿ 24 ಗಂಟೆ ಸೇವೆ ಸಲ್ಲಿಸಿದ್ದಾರೆ. ಆದರೆ ಕೆಲಸಕ್ಕೆ ತಕ್ಕ ವೇತನ ನೀಡುತ್ತಿಲ್ಲ, ಕೇಂದ್ರ ಸರಕಾರ 3 ಸಾವಿರ, ರಾಜ್ಯ ಸರಕಾರ 5 ಸಾವಿರ ಎನ್ನುತ್ತಿದ್ದು ರೂ. 650 ಮಾತ್ರ ಕೇಂದ್ರ ಸರಕಾರದಿಂದ ಕೈಗೆ ಸಿಗುತ್ತಿದೆ. ಪ್ರೋತ್ಸಾಹ ಧನ, ಗೌರವ ಧನ ಒಗ್ಗೂಡಿಸಿ ಮಾಸಿಕ ವೇತನ ನೀಡಬೇಕು. ಆರ್.ಸಿ.ಹೆಚ್‌ ಪೋರ್ಟಲ್‌ ಡೇಟಾ ಎಂಟ್ರಿಯ ಸಮಸ್ಯೆಯನ್ನು ಬಗೆಹರಿಸಬೇಕು ಹಾಗೂ ಆರೋಗ್ಯ ಮತ್ತು ನಿವೃತ್ತ ಪರಿಹಾರ ಸೇರಿದಂತೆ ಹಲವು ಸೌಲಭ್ಯ ನೀಡಬೇಕು ಎಂದು ಆಗ್ರಹಿಸಿ ಎಐಯುಟಿಯುಸಿ ಧರಣಿ ನಡೆಸಿತು.ಞ

















































































error: Content is protected !!
Scroll to Top