ಪಿ. ಚಿದಂಬರಂ ಮತ್ತು ಪುತ್ರ ಕಾರ್ತಿ ಚಿದಂಬರಂ ಅವರ ಮನೆ ಹಾಗೂ ಕಚೇರಿ ಮೇಲೆ ಸಿಬಿಐ ದಾಳಿ

ನವದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ವಿರುದ್ಧ ದಾಖಲಾಗಿರುವ ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರಿಗೆ ಸಂಬಂಧಿಸಿದ ನಿವೇಶನಗಳ ಮೇಲೆ ಸಿಬಿಐ ಮೇ.17ರಂದು ಅಚಾನಕ್ ದಾಳಿ ನಡೆಸಿದೆ. ದೆಹಲಿ, ಮುಂಬೈ, ಚೆನ್ನೈ ಸೇರಿದಂತೆ ದೇಶದ 7 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳ ಶೋಧ ಕಾರ್ಯ ನಡೆಯುತ್ತಿದೆ. ಮೂಲಗಳ ಪ್ರಕಾರ ಅವರ ಪುತ್ರ ಲೋಕಸಭಾ ಸಂಸದ ಕಾರ್ತಿ ಚಿದಂಬರಂ ಕೂಡ ಸಿಬಿಐ ತಪಾಸಣೆಗೊಳಪಟ್ಟಿದ್ದಾರೆ.
21/08/2019 ರಂದು ಐಎನ್‌ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಪಿ. ಚಿದಂಬರಂ ಅವರನ್ನು ಸಿಬಿಐ ಬಂಧಿಸಿತ್ತು. 16/10/2019 ರಂದು ತನ್ನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಅವರನ್ನು ಕಸ್ಟಡಿಗೆ ತೆಗೆದುಕೊಂಡಿತು. ಈ ಕುರಿತಂತೆ ಇಂದಿನ ದಾಳಿ ಮುಂದುವರಿದಿದೆ ಎಂದು ಹೇಳಲಾಗುತ್ತಿದೆ.





























































































































































































































error: Content is protected !!
Scroll to Top