ಶಿವಮೊಗ್ಗ : ಸಾಹಿತಿ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕೃತ ಡಿ. ಎಸ್. ನಾಗಭೂಷಣ್ (70ವ.) ಮೇ 18ರಂದು ನಿಧನರಾದರು. ದೆಹಲಿ ಆಕಾಶವಾಣಿಯಲ್ಲಿ ಕನ್ನಡ ವಾರ್ತಾ ವಾಚಕರಾಗಿ, ಸಹಾಯಕ ನಿಲಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದ ಇವರು 2005 ರಲ್ಲಿ ವೃತ್ತಿಯಿಂದ ಸ್ವಯಂ ನಿವೃತ್ತಿ ಪಡೆದು ಓದು, ಬರವಣಿಗೆಯನ್ನು ಹವ್ಯಾಸವಾಗಿಸಿಕೊಂಡು ಕಥೆ ಸೇರಿದಂತೆ ಹಲವಾರು ಕೃತಿಗಳನ್ನು ರಚಿಸಿದ್ದರು. ನಾಗಭೂಷಣ್ ರವರ ಗಾಂಧಿ ಕಥನ ಕೃತಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನವಾಗಿತ್ತು. ಹತ್ತು ವರ್ಷ ಹೊಸ ಮನುಷ್ಯ ಮಾಸಿಕ ಪತ್ರಿಕೆಯ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ಮೃತರು ಮೂಲತ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿಪ್ಪಸಂದ್ರದವರಾಗಿದ್ದು, ಪ್ರಸ್ತುತ ಶಿವಮೊಗ್ಗ ವಿನೋಬಾನಗರದ ಕಲ್ಲಹಳ್ಳಿಯಲ್ಲಿ ನೆಲೆಸಿದ್ದರು.
Recent Comments
ಕಗ್ಗದ ಸಂದೇಶ
on