ಕೆನಡಾ : ನಮ್ಮ ಕನ್ನಡ ಕಂಪು ದೇಶಗಳಲ್ಲದೇ ವಿದೇಶಗಳಲೆಲ್ಲಾ ಪಸರಿಸುತ್ತಿದೆ. ಅಲ್ಲಿರುವ ಕನ್ನಡಿಗರು ಕನ್ನಡದಲ್ಲೇ ಮಾತನಾಡಿ ಕನ್ನಡದ ಹಿರಿಮೆ ಗರಿಮೆಯನ್ನು ಸಾರುತ್ತಿದ್ದಾರೆ. ಕೆನಡಾದ ಸಂಸದ ಕನ್ನಡಿಗ ಚಂದ್ರ ಆರ್ಯ ಸೇರ್ಪಡೆಗೊಂಡಿದ್ದಾರೆ. ಆರ್ಯ ಅವರು ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಅವರ ಕನ್ನಡಾಭಿಮಾನಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ಸಭಾಪತಿ ಹಾಗೂ ಅಲ್ಲಿ ನೆರೆದಿದ್ದವರ ಎದುರು ಮಾತನಾಡಿ ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ, ಕರ್ನಾಟಕ ರಾಜ್ಯದ, ತುಮಕೂರು ಜಿಲ್ಲೆಯ, ಶಿರಾ ತಾಲೂಕಿನ ದ್ವಾರಾಳು ಗ್ರಾಮದ ವ್ಯಕ್ತಿಯೊಬ್ಬ ಕೆನಡಾದಲ್ಲಿ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಮತ್ತು ಕನ್ನಡದಲ್ಲಿ ಮಾತನಾಡುವುದು ಸುಮಾರು ೫ ಕೋಟಿ ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ ಎಂದಿದ್ದಾರೆ.
Recent Comments
ಕಗ್ಗದ ಸಂದೇಶ
on