ಹಿಜಾಬ್ ಧರಿಸಿ ಬಂದ 6 ವಿದ್ಯಾರ್ಥಿನಿಯರ ಅಮಾನತು

ಮಂಗಳೂರು : ಜಿಲ್ಲೆಯ ಅಧಿಕಾರಿಗಳು ಗುರುವಾರ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದ 6 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ್ದಾರೆ. ಮತ್ತೊಂದು ಕಾಲೇಜಿನಲ್ಲಿ ತರಗತಿಗಳಿಗೆ ಹಾಜರಾಗುವಾಗ ಹಿಜಾಬ್ ಧರಿಸಿದ್ದಕ್ಕಾಗಿ 12 ವಿದ್ಯಾರ್ಥಿಗಳನ್ನು ಹಿಂದಕ್ಕೆ ಕಳುಹಿಸಲಾಗಿದೆ. 6 ವಿದ್ಯಾರ್ಥಿನಿಯರಿಗೆ ಸರಕಾರದ ಆದೇಶ ಮತ್ತು ತರಗತಿ ಕೊಠಡಿಗಳಲ್ಲಿ ಹಿಜಾಬ್ ಧರಿಸುವುದನ್ನು ನಿಷೇಧಿಸುವ ಹೈಕೋರ್ಟ್‌ನ ತೀರ್ಪಿನ ಬಗ್ಗೆ ತಿಳಿಹೇಳಲಾಯಿತು. ಆದರೂ ಹಿಜಾಬ್ ಮಾರ್ಗಸೂಚಿಗಳನ್ನು ಪದೇ ಪದೇ ಉಲ್ಲಂಘಿಸಿದ ಉಪ್ಪಿನಂಗಡಿ ಕಾಲೇಜಿನ ಆರು ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ. ಕಾಲೇಜಿನ ಪ್ರಾಂಶುಪಾಲರು ಕಾಲೇಜು ಉಪನ್ಯಾಸಕರ ಜತೆ ಸಭೆ ನಡೆಸಿದ ಬಳಿಕ ವಿದ್ಯಾರ್ಥಿಗಳನ್ನು ಅಮಾನತುಗೊಳಿಸುವ ನಿರ್ಧಾರ ಕೈಗೊಂಡಿದ್ದಾರೆ.
ಹಂಪನಕಟ್ಟೆ ಸಮೀಪದ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಅಧಿಕಾರಿಗಳು ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸುತ್ತಿದ್ದರೂ ಸಹ ಗುರುವಾರ ಹಿಜಾಬ್ ಧರಿಸಿ ಬಂದ 16 ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು. ಕಾಲೇಜು ಪ್ರಾಂಶುಪಾಲರು ತರಗತಿಗೆ ಪ್ರವೇಶ ನಿರಾಕರಿಸಿ ವಾಪಸ್ ಕಳುಹಿಸಿದ್ದಾರೆ. ಸಿಂಡಿಕೇಟ್ ಸಭೆಯಲ್ಲಿ ಈ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ಬಿಡುತ್ತಿಲ್ಲ ಎಂದು ದೂರು ನೀಡಿದ್ದರು. ಸರಕಾರದ ನಿಯಮಗಳು ಮತ್ತು ನ್ಯಾಯಾಲಯದ ಆದೇಶವನ್ನು ಪಾಲಿಸುವಂತೆ ಡಿಸಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದರು. ಆದರೆ ವಿದ್ಯಾರ್ಥಿಗಳು ಅದಕ್ಕೂ ಜಗ್ಗದೆ ಗುರುವಾರ ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು.









































error: Content is protected !!
Scroll to Top