ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಲ್ಲಿ ಓರ್ವ ಉಗ್ರನನ್ನು ಹೊಡೆದುರುಳಿಸಿದೆ. ಹತ್ಯೆಯಾದ ಉಗ್ರ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವ.
ಕುಲ್ಗಾಂನ ಖಾಂಡಿಪೋರಾದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿಗಳು ಲಭ್ಯವಾದ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಭಾರತೀಯ ಸೇನಾಪಡೆ ಕಾರ್ಯಾಚರಣೆಗಿಳಿದಿತ್ತು. ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದಾಗ ಸ್ಥಳವನ್ನು ಸುತ್ತುವರಿದ ಸೇನಾಪಡೆ ಎನ್ಕೌಂಟರ್ ನಡೆಸಿ ಓರ್ವ ಉಗ್ರನನ್ನು ಹತ್ಯೆ ಮಾಡಿದೆ. ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ.
ಕಾಶ್ಮೀರದಲ್ಲಿ ಉಗ್ರನ ಹತ್ಯೆ





















