ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸರ್ಕಾರದ ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಪರಿಸ್ಥಿತಿಯನ್ನು ಪರಿಶೀಲಿಸಿದ ಬಳಿಕ ಮುಂದಿನ ಒಂದೂವರೆ ವರ್ಷದಲ್ಲಿ 10 ಲಕ್ಷ ಮಂದಿಯನ್ನು ಕೇಂದ್ರದ ವಿವಿಧ ಇಲಾಖೆಗಳಿಗೆ ನೇಮಕಾತಿ ಮಾಡುವ ಘೋಷಣೆ ಮಾಡಿದ್ದಾರೆ.
ವಿವಿಧ ಇಲಾಖೆಗಳಲ್ಲಿ ಮಿಷನ್ ಮೋಡ್‌ನಲ್ಲಿ 10 ಲಕ್ಷ ನೇಮಕಾತಿಗಳನ್ನು ಮಾಡಲು ಪ್ರಧಾನಿ ನಿರ್ದೇಶನ ನೀಡಿದ್ದಾರೆಂದು ಪ್ರಧಾನಮಂತ್ರಿಗಳ ಕಾರ್ಯಾಲಯವು ಮಾಹಿತಿ ನೀಡಿದೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಮಂತ್ರಿಗಳ ಕಾರ್ಯಾಲಯ ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಮೋದಿ ಸರ್ಕಾರ ದೊಡ್ಡ ಹೆಜ್ಜೆ ಇಡಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಮುಂದಿನ ಒಂದೂವರೆ ವರ್ಷದಲ್ಲಿ ಮೋದಿ ಸರ್ಕಾರ 10 ಲಕ್ಷ ಉದ್ಯೋಗಗಳನ್ನು ಒದಗಿಸಲಿದೆ ಎಂದು ತಿಳಿಸಿದೆ.
ನಿರುದ್ಯೋಗ ಸಮಸ್ಯೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಪದೇ ಪದೆ ಟೀಕೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಈ ನಿರ್ಧಾರ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ.
ಒಂದೂವರೆ ವರ್ಷದಲ್ಲಿ 10 ಲಕ್ಷ ಮಂದಿಗೆ ನೌಕರಿ: ಮೋದಿ ಘೋಷಣೆ











