ಕೆ.ಎಂ.ಇ.ಎಸ್. ಶಿಕ್ಷಣ ಸಂಸ್ಥೆಗೆ ಉತ್ತಮ ಫಲಿತಾಂಶ

ಕಾರ್ಕಳ : ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕುಕ್ಕುಂದೂರಿನ ಕೆ.ಎಂ.ಇ.ಎಸ್. ಶಿಕ್ಷಣ ಸಂಸ್ಥೆಯ ವಿಜ್ಞಾನ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 24 ವಿದ್ಯಾರ್ಥಿಗಳು ತೇರ್ಗಡೆ ಹೊಂದುವ ಮೂಲಕ ಶೇ. 100 ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆಗೆ ಹಾಜರಾದ 48 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 96% ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಪವಿತ್ರಾ 587 ಅಂಕ ಗಳಿಸಿ ಸಂಸ್ಥೆಗೆ ಪ್ರಥಮ ಸ್ಥಾನಿಯಾಗಿದ್ದಾರೆ. ವಾಣಿಜ್ಯ ವಿಭಾಗದ ವಿಶಾಕ್‌ 586 ಅಂಕ ಗಳಿಸಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 16 ವಿದ್ಯಾರ್ಥಿಗಳು ಶೇಕಡಾ 90 ಕ್ಕಿಂತ ಅಧಿಕ ಅಂಕಗಳೊಂದಿಗೆ, 28 ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ಪಾಸಾಗಿರುತ್ತಾರೆ.





























































































































































































































error: Content is protected !!
Scroll to Top