ಜೂ.24ರಿಂದಲೇ ಅಗ್ನಿವೀರರ ನೇಮಕ ಪ್ರಕ್ರಿಯೆ

ಹೊಸದಿಲ್ಲಿ: ಕೆಲವು ರಾಜ್ಯಗಳಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಯನ್ನೂ ಲೆಕ್ಕಿಸದೆ ಅಗ್ನಿಪಥ್‌ ಯೋಜನೆಯನ್ನು ಅನುಷ್ಠಾನಿಸಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಅಗ್ನಿಪಥ್‌ ಯೋಜನೆಯಡಿ ಸೇನೆಗೆ ಅಗ್ನಿವೀರರ ನೇಮಕಾತಿ ಪ್ರಕ್ರಿಯೆಯು ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದು, ಸೇನೆಗೆ ಸೇರಲು ಬಯಸುವ ಯುವಕರು ಅದಕ್ಕಾಗಿ ತಯಾರಿ ಪ್ರಾರಂಭಿಸಲು ಮನವಿ ಮಾಡಿದ್ದಾರೆ.ಜೂ.24ರಿಂದ ನೇಮಕಾತಿ ಪ್ರಕ್ರಿಯೆ ಶುರುವಾಗುವ ಸುಳಿವನ್ನು ಅವರು ನೀಡಿದ್ದಾರೆ.
4 ವರ್ಷಗಳ ಒಪ್ಪಂದದ ನೇಮಕಾತಿ ಯೋಜನೆಯ ವಿರುದ್ಧ ಯುವ ಜನತೆ ಆತಂಕಪಡುವ ಅಗತ್ಯವಿಲ್ಲ.ಯುವ ಜನತೆಯ ಭವ್ಯ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯನ್ನು ಜಾರಿಗೆ ತರುತ್ತಿರುವುದಾಗಿ ಸಿಂಗ್‌ ಭರವಸೆ ನೀಡಿದ್ದಾರೆ.
2022ರ ಸಾಲಿಗೆ ಮಾತ್ರ ಯೋಜನೆಯಡಿ ನೇಮಕಾತಿಯ ಗರಿಷ್ಠ ವಯಸ್ಸಿನ ಮಿತಿಯನ್ನು 21 ವರ್ಷದಿಂದ 23 ವರ್ಷಕ್ಕೆ ಹೆಚ್ಚಿಸಿರುವ ಸರ್ಕಾರದ ನಿರ್ಧಾರವು ಗಮನಾರ್ಹ ಸಂಖ್ಯೆಯಲ್ಲಿ ಯುವಕರು ಸಶಸ್ತ್ರ ಪಡೆಗಳಿಗೆ ಸೇರಲು ಅನುವು ಮಾಡಿಕೊಡುತ್ತದೆ ಎಂದು ಹೇಳಿದ್ದಾರೆ.
ಹಲವಾರು ರಾಜ್ಯಗಳಲ್ಲಿ ನಿರಂತರ ಹಿಂಸಾತ್ಮಕ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರನ್ನು ತಲುಪಲು ಸಿಂಗ್ ಟ್ವೀಟರ್ ಮೂಲಕ ಕೇಂದ್ರದ ನಿರ್ಧಾರವನ್ನು ತಿಳಿಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಸೇನೆಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯದ ಕಾರಣ ಹಲವು ಯುವಕರಿಗೆ ಸೇನೆಗೆ ಸೇರುವ ಅವಕಾಶ ಸಿಕ್ಕಿಲ್ಲ. ಹೀಗಾಗಿ ಯುವಕರ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಸೂಚನೆ ಮೇರೆಗೆ ಕೇಂದ್ರ ಸರ್ಕಾರ ಅಗ್ನಿವೀರರ ನೇಮಕಾತಿಯ ವಯಸ್ಸಿನ ಮಿತಿಯನ್ನು 21 ವರ್ಷದಿಂದ 23 ವರ್ಷಕ್ಕೆ ಹೆಚ್ಚಿಸಿದೆ ಎಂದು ಸಿಂಗ್ ಹೇಳಿದರು.









































































































































































error: Content is protected !!
Scroll to Top