ಅಗ್ನಿಪಥ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ ಸೇನೆ : ಜುಲೈ ತಿಂಗಳಲ್ಲಿ ಆನ್‌ಲೈನ್ ನೋಂದಣಿ ಆರಂಭ

ನವದೆಹಲಿ : ಕೇಂದ್ರ ಸರ್ಕಾರ ಇತ್ತೀಚಿಗೆ ಘೋಷಣೆ ಮಾಡಿದ ಅಗ್ನಿಪಥ್ ಯೋಜನೆಯಡಿ ನೇಮಕಾತಿ ನಡೆಸಲು ಭಾರತೀಯ ಸೈನ್ಯೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು ಜುಲೈನಲ್ಲಿ ಆನ್‌ಲೈನ್ ನೋಂದಣಿ ಆರಂಭವಾಗಲಿದೆ. ಹೊಸ ಮಾದರಿಯ ಸೇನಾ ನೇಮಕಾತಿಯಲ್ಲಿ ಎಲ್ಲಾ ಉದ್ಯೋಗ ಆಕಾಂಕ್ಷಿಗಳು ವೆಬ್‌ಸೈಟ್‌ನಲ್ಲಿ ಆನ್‌ಲೈನ್ ನೋಂದಣಿ ಕಡ್ಡಾಯವಾಗಿದೆ ಎಂದು ಸೇನೆ ತಿಳಿಸಿದೆ.
ಭಾರತೀಯ ಸೇನೆಯಲ್ಲಿ ಅಗ್ನಿವೀರರ ಒಂದು ವಿಶಿಷ್ಟ ಶ್ರೇಣಿಯನ್ನು ರೂಪಿಸುತ್ತದೆ. ಇದು ಅಸ್ತಿತ್ವದಲ್ಲಿರುವ ಇತರೆ ಶ್ರೇಣಿಗಳಿಗಿಂತ ಭಿನ್ನವಾಗಿರುತ್ತದೆ. ಸೇನಾ ನೇಮಕಾತಿ ಯೋಜನೆ ಅಗ್ನಿಪಥ್ ವಿರೋಧಿಸಿ ದೇಶದ ಹಲವು ಭಾಗಗಳಲ್ಲಿ ಯುವ ಜನತೆ ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಸೇನಾಮುಖ್ಯಸ್ಥರು ಮಹತ್ವದ ಕ್ರಮಕ್ಕೆ ಮುಂದಾಗಿದ್ದು, ನೇಮಕಾತಿ ಪ್ರಕ್ರಿಯೆಗೆ ಪ್ರಮಾಣಪತ್ರ ಕಡ್ಡಾಯ ಎಂದು ಸೇನೆ ಹೇಳಿದೆ. ಈ ಕುರಿತು ಮಾಹಿತಿ ನೀಡಿರುವ ಸೇನಾ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಲೆಫ್ಟಿನೆಂಟ್‌ ಜನರಲ್‌ ಅನಿಲ್‌ ಪುರಿ ಅವರು, ಕೇಂದ್ರ ಸರಕಾರ ಘೋಷಿಸಿರುವ ಸೇನಾ ನೇಮಕಾತಿಗೆ ಸಂಬಂಧಿಸಿದ ಅಗ್ನಿಪಥ ಯೋಜನೆಗೆ ಅರ್ಜಿ ಸಲ್ಲಿಸುವವರು ಲಿಖಿತ ರೂಪದಲ್ಲಿ ಪ್ರತಿಜ್ಞಾ ಘೋಷಣೆಯನ್ನು ನೀಡಬೇಕಾಗುತ್ತದೆ ಎಂದು ಹೇಳಿದ್ದಾರೆ.













































error: Content is protected !!
Scroll to Top