ಬೆಂಗಳೂರಿಗೆ ಬಂದ ಪ್ರಧಾನಿ : ಸಾಲು ಸಾಲು ಪ್ರಶ್ನೆಗಳನ್ನು ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೈಸೂರುಗಳಲ್ಲಿ ಕಟ್ಚೆಚ್ಚರ ವಹಿಸಲಾಗಿದೆ. ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬೆಂಗಳೂರಿಗೆ ಆಗಮಿಸಿರುವ ಮೋದಿಯವರಿಗೆ ಸಾಲುಸಾಲು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ಹಲವು ಪ್ರಶ್ನೆಗಳನ್ನು ಮೋದಿಗೆ ಹ್ಯಾಶ್ ಟಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.
*ಬೆಂಗಳೂರು ಉಪನಗರ ರೈಲು ಯೋಜನೆ ನೆನೆಗುದಿಗೆ ಬೀಳಲು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಕಾರಣವೇ?

*ಹಿಂದಿ ಭಾಷೆಯನ್ನು ಹೇರಲು ಹೊರಟಿರುವ ಸಂದರ್ಭದಲ್ಲಿ ಕನ್ನಡದ ಅಸ್ಮಿತೆ ಬಗ್ಗೆ ನಿಮ್ಮ ನಿಲುವೇನು?
*ಅಮಿತ್ ಶಾ ಅವರ ಹಿಂದಿ ಹೇರಿಕೆಗೆ ನಿಮ್ಮ ಮೌನವೇಕೆ?
*ಬೆಂಗಳೂರು ಸುತ್ತಮುತ್ತ ಭಾಗಗಳಿಗೆ ನೀರುಣಿಸುವ ಮೇಕೆದಾಟು ಯೋಜನೆ ಜಾರಿಗೆ ವಿಳಂಬವೇಕೆ?
*ರಾಜ್ಯ ಸರಕಾರವೇಕೆ ಕರಾಳ ಕೃಷಿ ಕಾಯ್ದೆಯನ್ನು ರದ್ದುಪಡಿಸಿಲ್ಲ?
*ಬೆಂಗಳೂರು ಉಪನಗರ ರೈಲು ಯೋಜನೆಗೆ ಶೇ.20ರಷ್ಟು ವೆಚ್ಚವನ್ನು ಕೇಂದ್ರ ಸರಕಾರ ನೀಡಿದೆಯೇ?
*ರಾಜ್ಯ ಬಿಜೆಪಿ ಸರಕಾರದ ವಿರುದ್ಧ ಕೇಳಿಬಂದ ಶೇ.40ರಷ್ಟು ಕಮಿಷನ್ ಆರೋಪ ಬಗ್ಗೆ ತನಿಖೆ ಯಾವಾಗ?
*ಜಿಎಸ್ ಟಿ ಪರಿಹಾರ ಮೂರು ವರ್ಷ ಮುಂದುವರಿಸಬೇಕೆಂದು ಕೇಳಿದ್ದಕ್ಕೆ ನಿಮ್ಮ ಉತ್ತರವೇನು?
*ಜಿಎಸ್ ಟಿ ಜಾರಿ, ಕೊರೋನಾದಿಂದ ನೋಟು ಅನಾಣ್ಯೀಕರಣದಿಂದ ಉದ್ಯೋಗ ಕಳೆದುಕೊಂಡಿದ್ದಕ್ಕೆ ಹೊಣೆ ಯಾರು?
*ಕರ್ನಾಟಕದಿಂದ ಇಷ್ಟೊಂದು ತೆರಿಗೆ ಸಂಗ್ರಹವಾಗುತ್ತಿದ್ದರೂ ಕೇಂದ್ರದಿಂದ ರಾಜ್ಯಕ್ಕೆ ಏಕೆ ಕಡಿಮೆ ಕೊಡುಗೆ ಬರುತ್ತಿದೆ ಹೀಗೆ ಸಾಲು ಸಾಲು ಪ್ರಶ್ನೆಗಳಿಗೆ ಉತ್ತರಿಸುವಂತೆ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

















































error: Content is protected !!
Scroll to Top