ಕಾರ್ಕಳ : ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಕಾಲೇಜಿನಲ್ಲಿ ಒಟ್ಟು 74 ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆಗೆ ಹಾಜರಾಗಿದ್ದು, 37 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, 35 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಇಬ್ಬರು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು, ಶೇಕಡಾ 100% ಫಲಿತಾಂಶವು ಬಂದಿರುತ್ತದೆ. ಪ್ರಜ್ಞಾ ಪಿ. 585 ಅಂಕ, ಸಿದ್ಧಾರ್ಥ್ ಶಂಕರ್ 578, ಅಶ್ವಿನ್ ಕುಮಾರ್ ಬಿ. ವಿ. ಮತ್ತು ವೈಷ್ಣವ್ ಎಸ್. 576 ಅಂಕ ಗಳಿಸುವುದರೊಂದಿಗೆ ಕಾಲೇಜಿಗೆ ಪ್ರಥಮ ದ್ವಿತೀಯ ತೃತೀಯ ಸ್ಥಾನಿಯಾಗಿದ್ದಾರೆ.























