ಕಾಬೂಲ್: ಪೂರ್ವ ಅಫ್ಘಾನಿಸ್ಥಾನದ ಪಕ್ತಿಕಾ ಪ್ರಾಂತ್ಯದಲ್ಲಿ ನಿನ್ನೆ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 1000 ಗಡಿ ದಾಟಿದ್ದು, 1,500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಇನ್ನೂ ನೂರಾರು ಜನರು ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಒಂದೆಡೆ ಪಕ್ತಿಕಾ ಪ್ರಾಂತ್ಯದಲ್ಲಿ ಧಾರಾಕಾರ ಮಳೆಯಾಗುತ್ತಿರುವುದು ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಆದರೂ ರಕ್ಷಣಾ ಸಿಬ್ಬಂದಿ ಹಗಲು-ರಾತ್ರಿಯೆನ್ನದೇ ಅವಶೇಷಗಳಡಿ ಸಿಲುಕಿರುವವರನ್ನು ರಕ್ಷಿಸುತ್ತಿದ್ದಾರೆ ಮತ್ತು ಮೃತದೇಹಗಳನ್ನು ಹೊರತೆಗೆಯುತ್ತಿದ್ದಾರೆ.
ಘಟನೆಯಲ್ಲಿ ಮಕ್ಕಳು, ಮಹಿಳೆಯರು ಸೇರಿ 1,500ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗಳಿಗೆ ಸಾಗಿಸಲು ರಾಜಧಾನಿ ಮತ್ತು ನೆರೆಯ ಪ್ರಾಂತ್ಯಗಳಿಂದ ಭೂಕಂಪ ಪೀಡಿತ ಪ್ರದೇಶಕ್ಕೆ ಆಂಬ್ಯುಲೆನ್ಸ್ಗಳು, ವೈದ್ಯಕೀಯ ಸಲಕರಣೆಗಳು ಮತ್ತು ಹೆಲಿಕಾಪ್ಟರ್ಗಳು ಆಗಮಿಸಿವೆ. ನೂರಾರು ಮನೆಗಳು ಕುಸಿದು ಹೋಗಿವೆ. ಅನೇಕರು ಬೀದಿ ಪಾಲಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ 6.1ರಷ್ಟು ಭೂಕಂಪದ ತೀವ್ರತೆ ದಾಖಲಾಗಿದ್ದು, 50 ಕಿಲೋ ಮೀಟರ್ ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಇದೆ ಎಂದು ಗುರುತಿಸಲಾಗಿದೆ.
ಪಾಕಿಸ್ಥಾನದ ರಾಜಧಾನಿ ಇಸ್ಲಾಮಾಬಾದ್ ಮತ್ತು ಪೂರ್ವ ಪಂಜಾಬ್ ಪ್ರಾಂತ್ಯದ ಇತರೆಡೆ ಕಂಪನದ ಅನುಭವವಾಗಿದೆ. ಕಂಪನ ಕೇಂದ್ರದಿಂದ 500 ಕಿಲೋ ಮೀಟರ್ಗಳಷ್ಟು ವ್ಯಾಪ್ತಿಯ ಜನರಿಗೆ ಭೂಮಿ ನಡುಗಿದ ಅನುಭವವಾಗಿದೆ ಎಂದು ಯುರೋಪಿಯನ್ ಭೂಕಂಪನ ಸಂಸ್ಥೆ ಇಎಂಎಸ್ಸಿ ಹೇಳಿದೆ.
ಅಫ್ಘಾನಿಸ್ಥಾನ ಭೂಕಂಪ: 1,000 ದಾಟಿದ ಸಾವಿನ ಸಂಖ್ಯೆ
Recent Comments
ಕಗ್ಗದ ಸಂದೇಶ
on