ಕಾರ್ಕಳ : 10 ಕೋಟಿ ರೂ. ವೆಚ್ಚದಲ್ಲಿ ಬೈಲೂರಿನಲ್ಲಿ ನಿರ್ಮಾಣವಾಗುತ್ತಿರುವ ಪರಶುರಾಮ ಥೀಮ್ ಪಾರ್ಕ್ಗೆ ಸಚಿವ ಸುನೀಲ್ ಕುಮಾರ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಗುರುವಾರ ಮುಂಜಾನೆ ಭೇಟಿ ನೀಡಿ ಕಾಮಗಾರಿ ವೀಕ್ಷಿಸಿದರು. ಬೆಳಿಗ್ಗೆ 7:30ರ ವೇಳೆ ಭೇಟಿ ನೀಡಿ ಅಭಿವೃದ್ಧಿ ಕಾಮಗಾರಿ ಪರಿಶೀಲಿಸಿದರು. ಬಳಿಕ ಕಾಮಗಾರಿ ಕೈಗೆತ್ತಿಕೊಂಡಿರುವ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅವರೊಂದಿಗೆ ಚರ್ಚಿಸಿದರು.

ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಎಡಿ ಪೂರ್ಣಿಮಾ, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ್ ಹೆಗ್ಡೆ, ಜಿ.ಪಂ. ನಿಕಟಪೂರ್ವ ಸದಸ್ಯರಾದ ಸುಮಿತ್ ಶೆಟ್ಟಿ ಕೌಡೂರು, ಉದಯ ಕೋಟ್ಯಾನ್, ರೇಶ್ಮಾ ಉದಯ ಶೆಟ್ಟಿ, ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್, ನಿಟ್ಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಕರುಣಾಕರ್ ಕೋಟ್ಯಾನ್ ಸಾಣೂರು, ಬಿಜೆಪಿ ಯುವಮೋರ್ಚಾ ಜಿಲ್ಲಾಧ್ಯಕ್ಷ ವಿಖ್ಯಾತ್ ಶೆಟ್ಟಿ, ತಾ.ಪಂ. ಮಾಜಿ ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ನಿಕಟ ಪೂರ್ವ ಸದಸ್ಯ ಅಶೋಕ್ ಶೆಟ್ಟಿ, ಬಿಜೆಪಿ ಪ್ರಮುಖರಾದ ರವೀಂದ್ರ ಕುಮಾರ್ ಕುಕ್ಕುಂದೂರು, ಜಯರಾಮ ಸಾಲ್ಯಾನ್, ವಿಕ್ರಂ ಹೆಗ್ಡೆ, ಸಚ್ಚಿದಾನಂದ ಶೆಟ್ಟಿ, ವಿವಿಧ ಗ್ರಾ.ಪಂ. ಅಧ್ಯಕ್ಷರು, ನಿರ್ಮಿತಿ ಕೇಂದ್ರದ ಇಂಜಿನೀಯರ್ಗಳಾದ ಸಚಿನ್ ಸನಿಲ್, ಪವನ್ ಪೆರ್ಮುಡಾ ಮೊದಲಾದವರು ಉಪಸ್ಥಿತರಿದ್ದರು.

