ಭಾರತೀಯ ಸೇನೆ-ಸಿಸಿಬಿ ಜಂಟಿ ಕಾರ್ಯಾಚರಣೆ : ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡಿಸುತ್ತಿದ್ದ ವ್ಯಕ್ತಿ ಬಂಧನ

ಬೆಂಗಳೂರು : ಭಾರತೀಯ ಸೇನಾಪಡೆ- ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿದ್ದು, ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡು ಮಾಡುತ್ತಿದ್ದ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದೆ. ಬಂಧಿತನನ್ನು ಶರ್ಫುದ್ದೀನ್ (41ವ.) ಎಂದು ಗುರುತಿಸಲಾಗಿದೆ. ಆತನಿಂದ 32 ಸಿಮ್ ಕಾರ್ಡ್‌ಗಳನ್ನು ಹೊಂದಬಹುದಾದ 58 ಸಿಮ್ ಬಾಕ್ಸ್ ಸಾಧನಗಳನ್ನು ವಶಪಡಿಸಿಕೊಂಡಿದ್ದಾರೆ. ಕೇರಳ ಮೂಲದ ಈತ ಅಂತರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಮಾರ್ಪಾಡು ಮಾಡುತ್ತಿದ್ದ. ಈತನನ್ನು ಬಳಸಿಕೊಂಡು ಪಾಕಿಸ್ತಾನದ ಐಎಸ್ಐ ಭಾರತದಲ್ಲಿ ಬೇಹುಗಾರಿಕೆ ನಡೆಸುತ್ತಿದೆ ಎಂಬ ಮಾಹಿತಿಗಳು ತಿಳಿದುಬಂದಿದ್ದು, ಈ ಬಗ್ಗೆ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.





























































































































































































































error: Content is protected !!
Scroll to Top