Tuesday, July 5, 2022
spot_img
Homeಸುದ್ದಿಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ

ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ

ಬೆಂಗಳೂರು: ಐಟಿ ಇಲಾಖೆ ಗುರುವಾರ ಬೆಳ್ಳಂಬೆಳಗ್ಗೆ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಿದೆ. ರಾಜಕೀಯ ಮುಖಂಡರು,ಸರಕಾರಿ ಅಧಿಕಾರಿಗಳು ಮತ್ತು ಉದ್ಯಮಿಗಳ ಅಕ್ರಮ ಸಂಪತ್ತಿನ ಮೇಲೆ ಕಣ್ಣಿಡುತ್ತಿದ್ದ ಐಟಿ ಇಲಾಖೆ ಇದೀಗ ಶಿಕ್ಷಣ ಸಂಸ್ಥೆಗಳ ಮೇಲೂ ದೃಷ್ಟಿ ಹರಿಸಿದೆ.
ಆದಾಯ ತೆರಿಗೆ ವಿವರ ಸಲ್ಲಿಕೆಯಲ್ಲಿ ಲೋಪದೋಷ, ತೆರಿಗೆ ವಂಚನೆ, ಅಕ್ರಮದ ಮಾಹಿತಿ ಆಧಾರದ ಮೇಲೆ ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗಿದೆ. ಶ್ರೀಕೃಷ್ಣದೇವರಾಯ ಶಿಕ್ಷಣ ಸಂಸ್ಥೆ, ರೇವಾ ಯೂನಿವರ್ಸಿಟಿ ಸೇರಿದಂತೆ ನಗರದ ಹಲವು ಖಾಸಗಿ ಶಿಕ್ಷಣ ಸಂಸ್ಥೆಗಳ ಮೇಲೆ ಇಂದು ದಾಳಿ ನಡೆದಿದೆ.
ಕರ್ನಾಟಕ ಮತ್ತು ಗೋವಾ ಮೂಲದ ಐಟಿ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆದಿದ್ದು, ನೆರೆಯ ಆಂಧ್ರ ಪ್ರದೇಶದಲ್ಲಿ ಕೂಡ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ನಡೆದಿದೆ.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!