ಕಾರ್ಕಳ : ಮಿಯ್ಯಾರು ಕಲ್ಲಗುಪ್ಪೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಡುಪಿ ಟೆಕ್ಸಸ್ ಇನ್ಸ್ಟ್ರುಮೆಂಟ್ಸ್ ಮತ್ತು ಯೂತ್‌ಫಾರ್ ಸೇವಾ ಸಂಸ್ಥೆಯ ವತಿಯಿಂದ ಶಾಲಾ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ಜೂ. 23 ರಂದು ವಿತರಿಸಲಾಯಿತು. ಸಂಸ್ಥೆಯ ಸದಸ್ಯರಾದ ಸುಹಾಸ್ ಜಾದವ್ ಜೆ., ಗಿರೀಶ್ ಎಂ., ಮಾಧವ್ ಪರೀಕ್, ಶಿಗಿನ್ ಭಾಸ್ಕರ್, ರಜತ್ ಪಾಟೀಲ್, ಭಾಸ್ಕರ್ ಮೆಂಡಲ್ ಮತ್ತು ರಮಿತಾ ಶೈಲೇಂದ್ರ, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಸಂತೋಷ್ ಕುಮಾರ್ ಶೆಟ್ಟಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ವಿಜಯ್ ಶೆಟ್ಟಿ, ಮುಖ್ಯಶಿಕ್ಷಕ ಮನೋಹರ್, ಶಿಕ್ಷಕ ವೃಂದ ಮತ್ತು ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕಲ್ಲಗುಪ್ಪೆ ಶಾಲೆಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ
