ಉಡುಪಿ : ಸಮಾಜ ಕಲ್ಯಾಣ ಇಲಾಖೆಯ ದೈಹಿಕ ನಿರ್ದೇಶಕರ ಹುದ್ದೆಗೆ ಅಗ್ನಿವೀರರನ್ನು ನೇಮಿಸಲು ಅಗತ್ಯ ನೀತಿ ಬದಲಾವಣೆಗಳನ್ನು ರೂಪಿಸಲು ಚಿಂತನೆ ನಡೆಸಿದ್ದೇವೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ದೈಹಿಕ ನಿರ್ದೇಶಕರ ಹುದ್ದೆಗೆ ಮೀಸಲಾತಿ ರೂಪಿಸಲು ಉದ್ದೇಶಿಸಿದ್ದು, ಶೇ.75ರಷ್ಟು ಮೀಸಲಾತಿ ಕಲ್ಪಿಸಲು ನೀತಿ ನಿರ್ಧಾರ ರೂಪಿಸುವಂತೆ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇತರೆ ಹುದ್ದೆಗಳಲ್ಲೂ ಆದ್ಯತೆ ನೀಡುವ ಯೋಚನೆ ಇದೆ. ಕಡತವನ್ನು ಮಂಡಿಸಲು ಈಗಾಗಲೇ ಟಿಪ್ಪಣಿ ಕೊಡಲಾಗಿದೆ. ಈ ಯೋಜನೆಯನ್ನು ಜಾರಿ ಮಾಡಿ ಅಗ್ನಿ ವೀರರಿಗೆ ಅವಕಾಶ ನೀಡಲು ಯೋಚಿಸಲಾಗಿದೆ ಎಂದರು.
ಅಗ್ನಿವೀರರಿಗೆ ಸಮಾಜ ಕಲ್ಯಾಣ ಇಲಾಖೆಯಲ್ಲಿ ಮೀಸಲಾತಿ : ಸಚಿವ ಕೋಟ
Recent Comments
ಕಗ್ಗದ ಸಂದೇಶ
on