Tuesday, July 5, 2022
spot_img
Homeಸುದ್ದಿದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಕೆ

ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಕೆ

ಹೊಸದಿಲ್ಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ದೆಹಲಿಯಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ಚುನಾವಣಾಧಿಕಾರಿಗಳ ಮುಂದೆ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದ್ರೌಪದಿ ಮುರ್ಮು ಅವರು ನಿನ್ನೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಅವರ ಉಮೇದುವಾರಿಕೆಯ ಬಗ್ಗೆ ದೇಶಾದ್ಯಂತ ಭಾರಿ ಚರ್ಚೆ ನಡೆಯುತ್ತಿದೆ.
ದ್ರೌಪದಿ ಮುರ್ಮು ಅವರ ಉಮೇದುವಾರಿಕೆಯ ಬಗ್ಗೆ ಭಾರತದಾದ್ಯಂತ ಸಮಾಜದ ಎಲ್ಲ ವರ್ಗಗಳಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ. ತಳಮಟ್ಟದ ಸಮಸ್ಯೆಗಳ ಬಗ್ಗೆ ಅವರ ತಿಳಿವಳಿಕೆ ಮತ್ತು ಭಾರತದ ಅಭಿವೃದ್ಧಿಯ ದೃಷ್ಟಿಕೋನ ಅತ್ಯುತ್ತಮವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದ್ರೌಪದಿ ಮುರ್ಮು ಅವರು ರಾಷ್ಟ್ರಪತಿಯಾಗಿ ಆಯ್ಕೆಯಾದರೆ ದೇಶದ ಬುಡಕಟ್ಟು ಜನಾಂಗದ ಮೊದಲ ರಾಷ್ಟ್ರಪತಿ ಹಾಗೂ ದೇಶದ ಎರಡನೇ ಮಹಿಳಾ ರಾಷ್ಟ್ರಪತಿ ಎನಿಸಿಕೊಳ್ಳಲಿದ್ದಾರೆ. ಈ ಮೊದಲು ಯುಪಿಎ ಮೈತ್ರಿಕೂಟದ ಸರ್ಕಾರವಿದ್ದಾಗ ಪ್ರತಿಭಾ ಪಾಟೀಲ್ ರಾಷ್ಟ್ರಪತಿಯಾಗಿದ್ದರು.











---

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!