ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ಪರಿಗಣನೆ ರದ್ದು ಮಾಡುವಂತೆ ರೈತರ ಪ್ರತಿಭಟನೆ

ಬೆಂಗಳೂರು : ರಾಜ್ಯದ ರೈತರ ಸಾಲ ನೀತಿ ಬದಲಾಯಿಸಿ ಕೃಷಿ ಸಾಲಕ್ಕೆ ಸಿಬಿಲ್ ಸ್ಕೋರ್ ರದ್ದುಗೊಳಿಸಲು ಒತ್ತಾಯಿಸಿ ಆರ್ ಬಿ ಐ ಮುಂದೆ ಇಂದು ರೈತರು ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಕರ್ನಾಟಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ, ರೈತರು ಕೃಷಿ ಚಟುವಟಿಕೆ ನಡೆಸಲು ಬ್ಯಾಂಕ್‌ನಲ್ಲಿ ಸಾಲ ಕೇಳಲು ಹೋದಾಗ ಸಾಲಗಾರರ ಸಿಬಿಲ್ ಪರೀಕ್ಷೆ ಮಾಡಿ ನಂತರ ಸಾಲ ಕೊಡಬೇಕೆ ಬೇಡವೆ ಎಂದು ತಿಳಿಸುತ್ತೇವೆ ಎನ್ನುತ್ತಾರೆ. ಇದರಿಂದ ಬಹುತೇಕ ರೈತರಿಗೆ ಸಾಲ ಸಿಗದಂತೆ ಆಗುತ್ತದೆ. ರೈತ ದೇಶದ ಜನರಿಗೆ ಆಹಾರ ಉತ್ಪಾದನೆ ಮಾಡುವ ಸಲುವಾಗಿ ಬೆಳೆ ಬೆಳೆಯಲು, ವ್ಯವಸಾಯ ಚಟುವಟಿಕೆಗಾಗಿ ಸಾಲ ತೆಗೆದುಕೊಳ್ಳುತ್ತಾನೆ. ಕೆಲವು ಸಂದರ್ಭ ಪ್ರಕೃತಿಯ ವಕ್ರದೃಷ್ಟಿಯಿಂದ ಅತಿವೃಷ್ಟಿ, ಅನಾವೃಷ್ಟಿ, ಪ್ರವಾಹ ಹಾನಿ, ಬರಹಾನಿ ಸಿಲುಕಿ ಬೆಳೆ ನಷ್ಟ ಅನುಭವಿಸುತ್ತಾನೆ. ಇದರಿಂದ ಕೆಲವು ಸಂದರ್ಭಗಳಲ್ಲಿ ನಿಯಮಗಳ ಪ್ರಕಾರ ಸಕಾಲಕ್ಕೆ ಸಾಲ ಪಾವತಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ರೈತನ ಸಿಬಿಲ್ ಸ್ಕೋರ್ ಉತ್ತಮವಾಗಿರಲು ಸಾಧ್ಯವಾಗುವುದಿಲ್ಲ. ಎಲ್ಲ ವಿಷಯಗಳನ್ನು ಗಮನಿಸಿ ರೈತರ ಕೃಷಿ ಚಟುವಟಿಕೆಗೆ ನೀಡುವ ಸಾಲಕ್ಕೆ ಸಿಬಿಲ್ ಸ್ಕೋರ್ ತಾಳೆ ಹಾಕುವ ಪದ್ಧತಿಯನ್ನು ರದ್ದು ಪಡಿಸಬೇಕು ಎಂದು ಒತ್ತಾಯಿಸಿದರು.





























































































































































































































error: Content is protected !!
Scroll to Top