*ಆಡಳಿತರೂಢ ಪಕ್ಷದ ಹೆಡ್ ಆಫೀಸ್ ಟಾರ್ಗೆಟ್; ಕೇರಳದಲ್ಲಿ ಉದ್ವಿಗ್ನ ಸ್ಥಿತಿ
ತಿರುವನಂತಪುರ:ಹಿಂಸಾತ್ಮಕ ರಾಜಕೀಯ ಸಂಘರ್ಷಕ್ಕೆ ಕುಖ್ಯಾತವಾಗಿರುವ ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಆಡಳಿತರೂಢ ಸಿಪಿಎಂ ಪಕ್ಷದ ಪ್ರಧಾನ ಕಚೇರಿ ಮೇಲೆಯೇ ಬಾಂಬ್ ದಾಳಿಯಾಗಿದೆ. ಗುರುವಾರ ಮಧ್ಯರಾತ್ರಿ ಅಪರಿಚಿತ ವ್ಯಕ್ತಿಯೊಬ್ಬ ಸಿಪಿಎಂ ಕಚೇರಿ ಮೇಲೆ ಸ್ಫೋಟಲ ಎಸೆದಿದ್ದು, ಈ ಘಟನೆಗೆ ಎಡ ಪಕ್ಷದವರಿಂದ ಭಾರಿ ಆಕ್ರೋಶ ವ್ಯಕ್ತವಾಗಿದೆ. ರಾಜ್ಯದಲ್ಲಿ ಉದ್ವಿಗ್ನ ಸ್ಥಿ ನಿರ್ಮಾಣವಾಗಿದೆ.
ರಾತ್ರಿ 11.30ರ ಸುಮಾರಿಗೆ ಬೈಕಿನಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಯೊಬ್ಬ ನಗರದ ಹೃದಯಭಾಗದಲ್ಲಿರುವ ಎಕೆಜಿ ಸೆಂಟರ್ ಮೇಲೆ ಸ್ಫೋಟಕ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ ಸಿಪಿಐ(ಎಂ) ಮುಖಂಡರು ಇದೊಂದು ಬಾಂಬ್ ದಾಳಿ ಎಂದು ಆರೋಪಿಸಿದ್ದಾರೆ. ಎಕೆಜಿ ಸೆಂಟರ್ನಲ್ಲಿ ತಂಗಿದ್ದ ಕೆಲ ಸಿಪಿಐ(ಎಂ) ಮುಖಂಡರು ಕಟ್ಟಡದ ಹೊರಗೆ ಭಾರಿ ಸ್ಫೋಟದ ಶಬ್ದ ಕೇಳಿಸಿದ್ದಾಗಿ ಹೇಳಿದ್ದಾರೆ.
ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಘಟನಾ ಸ್ಥಳ ಮತ್ತು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಸಹ ತಪಾಸಣೆ ನಡೆಸಿದೆ.
ಎಕೆಜಿ ಸೆಂಟರ್ನ ಅಧಿಕೃತ ಮಾಧ್ಯಮ ಗುಂಪಿನ ಮೂಲಕ ಸಿಪಿಐ(ಎಂ) ಬಿಡುಗಡೆ ಮಾಡಿದ ಸಿಸಿಟಿವಿ ದೃಶ್ಯಗಳಲ್ಲಿ, ವ್ಯಕ್ತಿಯೊಬ್ಬ ಮೋಟಾರ್ ಬೈಕ್ನಲ್ಲಿ ಸ್ಥಳಕ್ಕೆ ಆಗಮಿಸಿ ಕಟ್ಟಡದ ಮೇಲೆ ಸ್ಫೋಟಕ ಎಸೆದು ಸ್ಥಳದಿಂದ ಪರಾರಿಯಾಗುತ್ತಿರುವುದು ಕಂಡುಬಂದಿದೆ. ಸ್ಫೋಟಕ ಎಕೆಜಿ ಕೇಂದ್ರದ ಕಲ್ಲಿನ ಗೋಡೆಗೆ ತಗುಲಿದೆ ಎನ್ನಲಾಗಿದೆ.
ಸಿಪಿಎಂ ಪ್ರಧಾನ ಕಚೇರಿಯ ಮೇಲೆ ಬಾಂಬ್ ದಾಳಿ
Recent Comments
ಕಗ್ಗದ ಸಂದೇಶ
on