Sunday, October 2, 2022
spot_img
Homeದೇಶನೂಪುರ್ ಶರ್ಮ ಹೇಳಿಕೆಯಿಂದ ದೇಶಕ್ಕೆ ಬೆಂಕಿ ಬಿತ್ತು, ಆಕೆ ಇಡೀ ದೇಶದ ಕ್ಷಮೆ ಯಾಚಿಸಬೇಕು :...

ನೂಪುರ್ ಶರ್ಮ ಹೇಳಿಕೆಯಿಂದ ದೇಶಕ್ಕೆ ಬೆಂಕಿ ಬಿತ್ತು, ಆಕೆ ಇಡೀ ದೇಶದ ಕ್ಷಮೆ ಯಾಚಿಸಬೇಕು : ಸುಪ್ರೀಂ ಕೋರ್ಟ್ ಕೆಂಡಾಮಂಡಲ

ದೆಹಲಿ : ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆಗೆ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್ ಶರ್ಮಾ ಇಡೀ ದೇಶದ ಕ್ಷಮೆ ಯಾಚಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಸುಪ್ರೀಂ ಕೋರ್ಟ್ ನೂಪುರ್ ಶರ್ಮಾ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಪ್ರವಾದಿ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದ್ದಕ್ಕೆ ಅವರು ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ಹೇಳಿದೆ.

ನೂಪುರ್ ಶರ್ಮಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಸುಪ್ರೀಂ ಕೋರ್ಟ್, ಅಮಾನತುಗೊಂಡಿರುವ ಬಿಜೆಪಿ ವಕ್ತಾರರು ರಾಷ್ಟ್ರದ ಭದ್ರತೆಗೆ ಬೆದರಿಕೆ ಹಾಕಿರುವುದನ್ನು ಗಮನಿಸಿ ಇಡೀ ದೇಶದ ಕ್ಷಮೆಯಾಚಿಸುವಂತೆ ಸೂಚಿಸಿದೆ. ಆಕೆ ವಕೀಲೆ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ಲವೇ ಎಂದು ತಪರಾಕಿ ಹಾಕಿದೆ. ಆಕೆಯ ಹೇಳಿಕೆ ಹೇಗೆ ಪ್ರಚೋದನೆ ನೀಡಿತು ಎಂಬುದನ್ನು ನಾವು ನೋಡಿದ್ದೇವೆ, ಉದಯಪುರದಲ್ಲಿ ಟೈಲರ್ ಕೊಲೆಯಾದ ದುರದೃಷ್ಟಕರ ಘಟನೆಗೆ ಆಕೆ ಏಕಾಏಕಿ ಕಾರಣವಾಗಿದ್ದಾರೆ ಎಂದು ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆಕೆ ಪಕ್ಷದ ವಕ್ತಾರರಾಗಿರಬಹುದು, ಆದರೆ ಈ ನೆಲದ ಕಾನೂನನ್ನು ಗೌರವಿಸದೆ ಯಾವುದೇ ಹೇಳಿಕೆ ನೀಡಬಾರದು, ನೂಪುರ್ ಶರ್ಮಾ ಹೈಕೋರ್ಟ್​ಗೆ ಹೋಗಿ ಅರ್ಜಿ ಸಲ್ಲಿಸಲಿ ಎಂದು ಅವರ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನೂಪುರ ಶರ್ಮಾ ವಿರುದ್ಧ ಇಷ್ಟೊಂದು ಎಫ್.ಐ.ಆರ್. ದಾಖಲಾದರೂ ದೆಹಲಿ ಪೊಲೀಸ್ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

LEAVE A REPLY

Please enter your comment!
Please enter your name here

Most Popular

error: Content is protected !!