HomeUncategorizedಖಾಯಂಮಾತಿಗಾಗಿ ಪೌರ ಕಾರ್ಮಿಕರ ಪ್ರತಿಭಟನೆ

Related Posts

ಖಾಯಂಮಾತಿಗಾಗಿ ಪೌರ ಕಾರ್ಮಿಕರ ಪ್ರತಿಭಟನೆ

ಪುರಸಭಾ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಸಾರ್ವಜನಿಕರು ಸಹಕರಿಸುವಂತೆ ಮುಖ್ಯಾಧಿಕಾರಿ ರೂಪಾ ಶೆಟ್ಟಿ ಮನವಿ

ಉಡುಪಿ : ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ಪದ್ಧತಿಯಡಿ/ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ನೇರ ನೇಮಕಾತಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಜು. 1ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಹೊರಗುತ್ತಿಗೆ ನೌಕರರ ಸಂಘದ ಕರೆಗೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಯುತ್ತಿದೆ.

ಕಾರ್ಕಳ ಪುರಸಭೆಯಲ್ಲಿ‌ ಒಟ್ಟು 38 ಮಂದಿ ಪೌರ ಕಾರ್ಮಿಕರಾಗಿದ್ದಾರೆ. ಅವರಲ್ಲಿ 20 ಮಂದಿ ಖಾಯಂಮಾತಿ ನೆಲೆಯಲ್ಲಿ ಹಾಗೂ 18 ಮಂದಿ ನೇರ ಪಾವತಿ ಪದ್ಧತಿಯಡಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜು. 1ರಂದು ಎಲ್ಲ ಪೌರ ಕಾರ್ಮಿಕರೂ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಸೇವೆಯಲ್ಲಿ ವ್ಯತ್ಯಯ
ಸ್ವಚ್ಛತಾ ಸಿಬ್ಬಂದಿ, ಚಾಲಕರು, ಸೂಪರ್ ವೈಸರ್ ಗಳು, ಡಾಟಾ ಎಂಟ್ರಿ ಆಪರೇಟರ್ ಗಳು, ನೀರು ಸರಬರಾಜು ಸಹಾಯಕರು ಹೀಗೆ ಖಾಯಂಮೇತರ ಸಿಬ್ಬಂದಿ ಮುಷ್ಕರಕ್ಕೆ ತೆರಳಿದ ಹಿನ್ನೆಲೆಯಲ್ಲಿ ಕಾರ್ಕಳ ಪುರಸಭೆಯ ತ್ಯಾಜ್ಯ ವಿಲೇವಾರಿ, ಸ್ವಚ್ಛತೆ, ನೀರು ಸರಬರಾಜು, ತುರ್ತು ಸೇವೆಗಳಲ್ಲಿ ಏರುಪೇರಾಗುವ ಸಾಧ್ಯತೆಗಳಿವೆ.

ಸಹಕರಿಸಿ
ಪೌರ ಕಾರ್ಮಿಕರು ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಹಿನ್ನೆಲೆಯಲ್ಲಿ ಕಾರ್ಕಳ ಪುರಸಭೆಯ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮನೆ ಕಸವನ್ನ ರಸ್ತೆ ಬದಿಯಲ್ಲಿಡದೇ ವಿಲೇವಾರಿ ಮಾಡಿ ಸಹಕರಿಸುವಂತೆ ಪುರಸಭಾ ಮುಖ್ಯಾಧಿಕಾರಿ ರೂಪಾ ಶೆಟ್ಟಿ ಮನವಿ ಮಾಡಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Latest Posts

error: Content is protected !!