ಕತ್ತಿ ಮತ್ತೆ ರಾಜ್ಯ ವಿಭಜನೆ ಹೇಳಿಕೆ; ಬಿಜೆಪಿಗೆ ಮುಜುಗರ

ಬೆಂಗಳೂರು:ಬಿಜೆಪಿ ನಾಯಕತ್ವ ಎಚ್ಚರಿಸಿದ ಹೊರತಾಗಿಯೂ ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಮತ್ತೊಮ್ಮೆ ರಾಜ್ಯವನ್ನು ವಿಭಜಿಸುವ ಹೇಳಿಕೆ ನೀಡಿದ್ದಾರೆ. ಇದರಿಂದ ರಾಜ್ಯ ಬಿಜೆಪಿ ತೀವ್ರ ಮುಜುಗರ ಅನುಭವಿಸುತ್ತಿದೆ. ಚುನಾವಣೆ ಇನ್ನು ಕೇವಲ ಹತ್ತು ತಿಂಗಳು ದೂರವಿರುವಾಗ ಕತ್ತಿ ಯಾರ ಅಂಕೆಗೂ ಸಿಗದೆ ರಾಜ್ಯವನ್ನು ವಿಭಜಿಸಬೇಕೆಂದು ಪದೇ ಪದೆ ಹೇಳುತ್ತಿರುವುದು ಪ್ರತಿಪಕ್ಷಗಳಿಗೆ ಟೀಕಿಸಲು ತಾವೇ ಕೈಯಾರೆ ಅಸ್ತ್ರ ಕೊಟ್ಟಂತಾಗುತ್ತಿದೆ ಎಂದು ಹಲವು ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಭಿವೃದ್ಧಿಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂದು ಉಮೇಶ್‌ ಕತ್ತಿ ಪುನರುಚ್ಚರಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕತ್ತಿ, ದೇಶದಲ್ಲಿ 30 ರಾಜ್ಯಗಳಿವೆ. 50 ರಾಜ್ಯಗಳನ್ನಾಗಿ ಮಾಡಬೇಕು ಎನ್ನುವ ಚರ್ಚೆ ಆಗ್ತಿದೆ. ಉತ್ತರ ಪ್ರದೇಶದಲ್ಲಿ 21 ಕೋಟಿ ಜನಸಂಖ್ಯೆ ಇದ್ದು 4 ರಾಜ್ಯವಾಗಬೇಕು. ಮಹಾರಾಷ್ಟ್ರದಲ್ಲಿ 11 ಕೋಟಿ ಜನಸಂಖ್ಯೆ ಇದ್ದು ಅದನ್ನು 3 ರಾಜ್ಯ ಮಾಡಬೇಕು.ಕರ್ನಾಟಕದಲ್ಲಿ ಆರೂವರೆ ಕೋಟಿ ಜನಸಂಖ್ಯೆ ಇದೆ. ಈ ಹಿನ್ನೆಲೆ ಎರಡು ರಾಜ್ಯಗಳಾಗಿ ವಿಂಗಡಣೆ ಆಗಬೇಕು ಎಂದರು. ನಾನು 9 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ರಾಜ್ಯವಾಗಬೇಕು. ಮುಂದೆಯೂ ಬಿಜೆಪಿಯಲ್ಲಿಯೇ ಇರುತ್ತೇನೆ. ಬಿಜೆಪಿಯಲ್ಲಿದ್ದು ಮುಖ್ಯಮಂತ್ರಿ ಆಗುವ ಅರ್ಹತೆ ನನಗಿದೆ. ಪ್ರತ್ಯೇಕ ರಾಜ್ಯವಾದರೂ ನಾವು ಕನ್ನಡಿಗರೇ. ಕರ್ನಾಟಕ ಎರಡು ಭಾಗ ಆಗಬೇಕು, ನಾವು ಕೂಡಾ ಕನ್ನಡ ಭಾಷೆಯನ್ನೇ ಮಾತನಾಡುತ್ತೇವೆ. ನಾವು ಅಚಲ ಕನ್ನಡಿಗರು ಎಂದು ಹೇಳಿದರು.
ಮುಖ್ಯಮಂತ್ರಿಯಾಗಲು ಮಾತ್ರ ಉತ್ತರ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ರಾಜ್ಯದ ಬೇಡಿಕೆ ಇಟ್ಟಿಲ್ಲ ಎಂದು ಸ್ಪಷ್ಟಪಡಿಸಿದ ಅವರು, 224 ಶಾಸಕರ ಪೈಕಿ ನಾನೇ ಹಿರಿಯ. ನಾನು ಮುಖ್ಯಮಂತ್ರಿಯಾದರೆ ಅವಿಭಜಿತ ಕರ್ನಾಟಕಕ್ಕೆ ಮುಖ್ಯಮಂತ್ರಿಯಾಗಬೇಕು ಎಂಬುದು ನನ್ನ ಆಸೆ ಎಂದಿದ್ದಾರೆ.





























































































































































































































error: Content is protected !!
Scroll to Top