ಬೆಂಗಳೂರು : ಚುರುಕುಗೊಂಡ ಮುಂಗಾರು ಮಳೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವರುಣನ ಆರ್ಭಟವು ಮುಂದುವರೆಯಲಿದ್ದು, ಕರಾವಳಿ ಮತ್ತು ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್ ಹವಾಮಾನಾ ಇಲಾಖೆ ಘೋಷಿಸಿದೆ. ಕರಾವಳಿ ಸಮುದ್ರ ತೀರದಲ್ಲಿ 40-50 ಕಿ.ಮೀ. ವೇಗದಲ್ಲಿ ಗಾಳಿಯ ಚಲನೆ ಇರಲಿದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚನೆ ನೀಡಲಾಗಿದೆ. ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಗೆ ನದಿಗಳು ತುಂಬಿ ಹರಿಯುತ್ತಿದ್ದು, ಕಾವೇರಿ, ಲಕ್ಷ್ಮಣತೀರ್ಥ, ಪಯಸ್ವಿನಿ, ತ್ರಿವೇಣಿ ಸಂಗಮ, ಹಾರಂಗಿ ಡ್ಯಾಂ ಭರ್ತಿಯಾದ ಹಿನ್ನಲೆ ನದಿಯ ಪಕ್ಕದಲ್ಲಿ ವಾಸಿಸುತ್ತಿರುವ ಜನರು ಪ್ರವಾಹ ಭೀತಿಯಲ್ಲಿದ್ದಾರೆ.
ರಾಜ್ಯದಲ್ಲಿ ಮುಂದುವರೆದ ವರುಣನ ಅರ್ಭಟ : ಕರಾವಳಿ ಮತ್ತು ಪಶ್ಚಿಮ ಘಟ್ಟ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
