ಮುನಿಯಪ್ಪ ಕಾಂಗ್ರೆಸ್‌ಗೆ ಗುಡ್‌ಬೈ ಹೇಳ್ತಾರಾ?

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ, ಮಾಜಿ ಸಂಸದ ಕೆ.ಹೆಚ್. ಮುನಿಯಪ್ಪ ಾವರು ಕೂಡ ಕಾಂಗ್ರೆಸ್‌ಗೆ ಗುಡ್‌ಬೈ ಹೇಳಲು ತಯಾರಾಗಿದ್ದಾರೆ ಎಂಬ ವದಂತಿ ರಾಜಕೀಯ ವಲಯದಲ್ಲಿ ದಟ್ಟವಾಗಿ ಹರಡಿದೆ.
ಕಾಂಗ್ರೆಸ್‌ ನಾಯಕತ್ವದ ವಿರುದ್ಧ ಮುನಿಸಿಕೊಂಡಿರುವ ಮುನಿಯಪ್ಪ ಜೆಡಿಎಸ್‌ ಸೇರಲು ತೆರೆಮರೆಯಲ್ಲಿ ಮಾತಯಕತೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ಸೇರ್ಪಡೆ ಬಗ್ಗೆ ದೇವೇಗೌಡರ ಜೊತೆ ಒಂದು ಸುತ್ತಿನ ಮಾತುಕತೆಯೂ ನಡೆದಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸತತ ಏಳು ಬಾರಿ ಕಾಂಗ್ರೆಸ್ ನಿಂದ ಸಂಸದರಾಗಿ ಆಯ್ಕೆಯಾಗಿದ್ದ ಮುನಿಯಪ್ಪ ಕಳೆದ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.
ಅಲ್ಲಿಂದ ಅವರ ರಾಜಕೀಯ ಹಿನ್ನಡೆ ಶುರುವಾಗಿತ್ತು. ಇತ್ತೀಚೆಗೆ ಅವರು ತನ್ನನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂದು ಅಸಮಾಧಾನ ಹೊರ ಹಾಕಿದ್ದರು. ಡಾ.ಎಂ.ಸಿ ಸುಧಾಕರ್ ಮತ್ತು ಕೊತ್ತನೂರು ಮಂಜುನಾಥ್ ರನ್ನು ತನ್ನನ್ನು ಕೇಳದೆ ಪಕ್ಷಕ್ಕೆ ಸೇರಿಸಿಕೊಂಡಿರುವುದು ಅವರ ಆಕ್ರೋಶಕ್ಕೆ ಕಾರಣ ಎನ್ನಲಾಗಿದೆ.
ಇದೀಗ ಕಾಂಗ್ರೆಸ್ ಪಾಳಯದಿಂದ ಒಂದು ಕಾಲನ್ನ ಹೊರಗೆ ಇಟ್ಟಿರುವ ಮುನಿಯಪ್ಪ ಜೆಡಿಎಸ್ ಗೆ ಹೋಗಲು ತೆರೆಮರೆಯಲ್ಲಿ ಮಾತುಕತೆ ನಡೆಸುತ್ತಿರುವುದು ತಿಳಿದುಬಂದಿದೆ. ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲು ಬೆಂಬಲಿಗರ ಸಭೆ ಕರೆದಿದ್ದಾರೆನ್ನಲಾಗಿದೆ. ಕೋಲಾರದ ತಮ್ಮ ನಿವಾಸದಲ್ಲಿ ಮುಂದಿನ ರಾಜಕೀಯ ತೀರ್ಮಾನಕ್ಕಾಗಿ ಬೆಂಬಲಿಗರ ಸಭೆ ಕರೆದಿದ್ದಾರೆ ಎಂದು ತಿಳಿದು ಬಂದಿದೆ.









































































































































































error: Content is protected !!
Scroll to Top