Saturday, October 1, 2022
spot_img
Homeಸುದ್ದಿಮೆಟ್ಟಿಲಿನಿಂದ ಜಾರಿ ಬಿದ್ದ ಲಾಲೂ: ಭುಜದ ಮೂಳೆ ಮುರಿತ

ಮೆಟ್ಟಿಲಿನಿಂದ ಜಾರಿ ಬಿದ್ದ ಲಾಲೂ: ಭುಜದ ಮೂಳೆ ಮುರಿತ

ಪಾಟ್ನಾ: ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್‌ ಪಾಟ್ನಾದಲ್ಲಿರುವ ರಾಬ್ರಿದೇವಿ ಅವರ ಮನೆಯ ಮೆಟ್ಟಿಲುಗಳ ಮೇಲೆ ಎಡವಿ ಬಿದ್ದು ಭುಜದ ಮೂಳೆ ಮುರಿತಕ್ಕೊಳಗಾಗಿದ್ದಾರೆ.
ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಲಾಲು ಪ್ರಸಾದ್‌ ಅವರು ಕಿಡ್ನಿ ಸಮಸ್ಯೆಯ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ಅವಘಡ ಸಂಭವಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರ ಭುಜದಲ್ಲಿ ಮುರಿತವಾಗಿರುವುದು ಎಂಆರ್ ಐ ಪರೀಕ್ಷೆಗಳಿಂದ ಗೊತ್ತಾಗಿದೆ. ಮೂಳೆ ಕೂಡಿಕೊಳ್ಳಲು ಭುಜಕ್ಕೆ ಕಟ್ಟು ಹಾಕಲಾಗಿದೆ. ಭುಜದ ಮುರಿತ ಮತ್ತು ಬೆನ್ನಿನ ಗಾಯದ ಹೊರತಾಗಿ ಅವರಿಗೆ ಇನ್ಯಾವುದೇ ಸಮಸ್ಯೆಯಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Most Popular

error: Content is protected !!