Wednesday, August 17, 2022
spot_img
Homeರಾಜ್ಯಎಡಿಜಿಪಿ ಅಮೃತ್ ಪೌಲ್ ಬಂಧನ

ಎಡಿಜಿಪಿ ಅಮೃತ್ ಪೌಲ್ ಬಂಧನ

ಬೆಂಗಳೂರು: 545 ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪೌಲ್ ಅವರನ್ನು ಸಿಐಡಿ ಬಂಧಿಸಿದೆ. 

ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ನಾಲ್ಕು ಬಾರಿ ವಿಚಾರಣೆ ಎದುರಿಸಿದ್ದ ಅಮೃತ್ ಪೌಲ್ ರನ್ನು ಇಂದು ಸಿಐಡಿ ಅಧಿಕೃತವಾಗಿ ಬಂಧಿಸಿದೆ. ಅಮೃತ್ ಪೌಲ್ 25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂಪಾಯಿ ಡೀಲ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸಲು ಅವರನ್ನು ಸಿಐಡಿ ಬಂಧಿಸಿದೆ.

545 ಪಿಎಸ್ಐ ನೇಮಕಾತಿ ಅಕ್ರಮ ಸಂಬಂಧ ಅಮೃತ್ ಪೌಲ್ ಅವರಿಗೆ ಹಲವು ದೂರುಗಳು ಬಂದಿದ್ದು ಇದನ್ನು ಅವರು ನಿರ್ಲಕ್ಷಿಸಿದ್ದರು ಎಂಬ ಆರೋಪ ಸಹ ಅವರ ವಿರುದ್ಧ ಕೇಳಿಬಂದಿತ್ತು. ಅಕ್ರಮ ಬಯಲಿಗೆ ಬರುತ್ತಿದ್ದಂತೆ ಅಮೃತ್ ಪೌಲ್ ಅವರ ವರ್ಗಾವಣೆಗೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವರ್ಗಾಯಿಸಲಾಗಿತ್ತು.

545 ಪಿಎಸ್‌ಐ ಹುದ್ದೆಗಳ ಡೀಲ್ ನಡೆದಾಗ ಅಮೃತ್ ಪೌಲ್ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದರು. ಡಿವೈಎಸ್‌ಪಿ ಹಾಗೂ ಎಫ್‌ಡಿಎಯೊಂದಿಗೆ ಸೇರಿ ಅಮೃತ್ ಪೌಲ್ ಡೀಲ್ ಮಾಡಿಸಿದ್ದಾರೆ ಎಂಬ ಆರೋಪವಿದೆ. 

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!