Wednesday, August 17, 2022
spot_img
Homeಸುದ್ದಿಡಿಸಿ ಮಂಜುನಾಥ್, ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಸಸ್ಪೆಂಡ್‌

ಡಿಸಿ ಮಂಜುನಾಥ್, ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಸಸ್ಪೆಂಡ್‌

ಬೆಂಗಳೂರು : ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದು ಪರಪ್ಪನ ಅಗ್ರಹಾರದ ಜೈಲುಪಾಲಾಗಿರುವ ಐಎಎಸ್ ಅಧಿಕಾರಿ ಜಿ. ಮಂಜುನಾಥ್‌ ಹಾಗೂ ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಮಂಜುನಾಥ್ ಜಮೀನು ವ್ಯಾಜ್ಯ ಇತ್ಯರ್ಥ ಪಡಿಸಲು ವ್ಯಕ್ತಿಯೊಬ್ಬರಿಂದ ಐದು ಲಕ್ಷ ರೂ. ಲಂಚ ಪಡೆದ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದು, ಎಸಿಬಿಯಿಂದ ಬಂಧನಕ್ಕೊಳಗಾದ ನಂತರ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಅಮೃತ್ ಪೌಲ್ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನ ಸಿಐಡಿ ವಶಕ್ಕೆ ನೀಡಿ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದ ನಂತರ ಅವರನ್ನು ಸೇವೆಯಿಂದ ಸಸ್ಪೆಂಡ್ ಮಾಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಅಮೃತ್ ಪೌಲ್ 25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂಪಾಯಿ ಡೀಲ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸಲು ಸಿಐಡಿ ಅವರನ್ನು ಬಂಧಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!