ಮಂಗಳೂರು : ಜಿಲ್ಲೆಯಲ್ಲಿ ಭಾರಿ ಪ್ರಮಾಣದ ಗಾಳಿ ಸಹಿತ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಇಂದು ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ. ವಿ. ರಾಜೇಂದ್ರ ಆದೇಶ ನೀಡಿದ್ದಾರೆ.
ಉಡುಪಿ ಜಿಲ್ಲೆಯಾದ್ಯಂತ ಸತತ ಮೂರು ದಿನಗಳಿಂದ ನಿರಂತರ ಮಳೆಯಾಗುತ್ತಿರುವುದರಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಎರಡು ದಿನಗಳ ಕಾಲ ಹೆಚ್ಚಿನ ಮಳೆಯಾಗುವುದರಿಂದ, ಮುಂಜಾಗ್ರತ ಕ್ರಮವಾಗಿ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜು.5 ಇಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ/ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.