Wednesday, August 17, 2022
spot_img
Homeರಾಜ್ಯಚಾಕಲೇಟ್‌ ಕವರ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಮಾರಾಟ : ನಾಲ್ವರ ಬಂಧನ

ಚಾಕಲೇಟ್‌ ಕವರ್‌ನಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಮಾರಾಟ : ನಾಲ್ವರ ಬಂಧನ

ಬೆಂಗಳೂರು : ಕಾಲೇಜು ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಮಾರುತ್ತಿದ್ದ ನಾಲ್ವರನ್ನು ಆವಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆನ್ಲೈನ್‌ ಮೂಲಕ ವಿದ್ಯಾರ್ಥಿಗಳಿಗೆ ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಅವರು ವಿದೇಶದಿಂದ ಖರೀದಿಸುತ್ತಿದ್ದರು ಎನ್ನಲಾಗಿದೆ. ಬಂಧಿತರಿಂದ 8ಗ್ರಾಂ ಎಂಡಿಎಂ ಮಾತ್ರೆ, ನಾಲ್ಕು ಮೊಬೈಲ್‌ ಮತ್ತು ಬ್ಯಾಂಕ್‌ ಖಾತೆಯಲ್ಲಿದ್ದ 6 ಲಕ್ಷ ಹಣವನ್ನು ಜಪ್ತಿ ಮಾಡಿದ್ದಾರೆ. ಬಂಧಿತರಾದವರು ಮೊಹಮ್ಮದ್‌ ಹರ್ಸಾಲಾಂ, ಮೊಹಮ್ಮದ್‌ ನದೀಂ, ಸಚಿಂದರನ್‌ ಮತ್ತು ಮೋಸಿನ್‌ ಎಂದು ತಿಳಿದು ಬಂದಿದೆ. ಕೋಡ್ ವರ್ಡ್‌ ಮೂಲಕ ಡ್ರಗ್ಸ್‌ ಮಾರಾಟ ಮಾಡುತ್ತಿದ್ದರು ಮತ್ತು ಆನ್‌ಲೈನ್‌ ಮೂಲಕ ಹಣ ಹಾಕಿಸಿಕೊಳ್ಳುತ್ತಿದ್ದರು. ಕಾಲೇಜು ವಿದ್ಯಾರ್ಥಿಗಳೇ ಇವರ ಟಾರ್ಗೆಟ್‌ ಆಗಿತ್ತು ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!