Sunday, October 2, 2022
spot_img
Homeಸುದ್ದಿಪಿಯು ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ; ಗೌರವ ಸಂಭಾವನೆ ಹೆಚ್ಚಳ

ಪಿಯು ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ; ಗೌರವ ಸಂಭಾವನೆ ಹೆಚ್ಚಳ

ಬೆಂಗಳೂರು: ಸರ್ಕಾರ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಗೌರವ ಸಂಭಾವನೆ ಏರಿಕೆ ಮಾಡಿದ ಸಿಹಿಸುದ್ದಿ ನೀಡಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿ ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ ರೂ. 9,000 ದಿಂದ 12,000 ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವರ ಬಿ. ಸಿ. ನಾಗೇಶ್ ಟ್ವೀಟ್‌ ಮಾಡಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು 3,708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಶಾಲೆಗಳ ಅತಿಥಿ ಶಿಕ್ಷಕರು; ಜೂನ್ ತಿಂಗಳಿನಲ್ಲಿ ಕರ್ನಾಟಕ ಸರ್ಕಾರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡಿತ್ತು. ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ 2,500 ರೂ. ಹೆಚ್ಚಳ ಮಾಡಲಾಗಿತ್ತು. 7,500 ರೂ. ನಿಂದ 10,000ಕ್ಕೆ ಸಂಭಾವನೆ ಹೆಚ್ಚಳವಾಗಿತ್ತು.
ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಸಹ 2,500 ರೂ. ಏರಿಕೆಯಾಗಿತ್ತು. ಪರಿಷ್ಕರಣೆ ಬಳಿಕ ಗೌರವ ಸಂಭಾವನೆ ರೂ. 8000 ದಿಂದ 10,500ಕ್ಕೆ ಏರಿಕೆಯಾಗಿತ್ತು.

LEAVE A REPLY

Please enter your comment!
Please enter your name here

Most Popular

error: Content is protected !!