Homeಸ್ಥಳೀಯ ಸುದ್ದಿಪ.ಜಾತಿ ಮತ್ತು ಪ.ಪಂಗಡದವರಿಗೆ ಉಚಿತ 75 ಯೂನಿಟ್ ವಿದ್ಯುತ್ ಪೂರೈಕೆ : ಅರ್ಜಿ ಸ್ವೀಕಾರ

Related Posts

ಪ.ಜಾತಿ ಮತ್ತು ಪ.ಪಂಗಡದವರಿಗೆ ಉಚಿತ 75 ಯೂನಿಟ್ ವಿದ್ಯುತ್ ಪೂರೈಕೆ : ಅರ್ಜಿ ಸ್ವೀಕಾರ

ಕಾರ್ಕಳ : ಕುಕ್ಕುಂದೂರು ಪಂಚಾಯತ್‌ ನಲ್ಲಿ ಇಂದು ಮುಂಜಾನೆ ಸಮಯ 10ಕ್ಕೆ ಪ.ಜಾತಿ ಮತ್ತು ಪ.ಪಂಗಡದವರಿಗೆ ಉಚಿತ 75 ಯೂನಿಟ್ ವಿದ್ಯುತ್ ಪೂರೈಕೆಗಾಗಿ ಅರ್ಜಿ ಸ್ವೀಕಾರ ಕಾರ್ಯಕ್ರಮವು ಪಂಚಾಯತ್‌ ಸಭಾಂಗಣದಲ್ಲಿ ನೆರವೇರಿತು. ಮೆಸ್ಕಾಂ ಇಲಾಖೆಯ ಅಧಿಕಾರಿ ವಿಶ್ವನಾಥ್‌ ಶೆಟ್ಟಿ ಉಚಿತ 75 ಯೂನಿಟ್‌ ವಿದ್ಯುತ್‌ ಬಗ್ಗೆ ಮಾಹಿತಿಯನ್ನು ನೀಡಿದರು. ಸಭೆಯ ಅಧ್ಯಕ್ಷತೆಯನ್ನು ಗ್ರಾ. ಪಂ. ಅಧ್ಯಕ್ಷೆ ಶಶಿಮಣಿ ಸಂಪತ್‌ ವಹಿಸಿದ್ದು, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಉಪಾಧ್ಯಕ್ಷ ಅನಿಲ್‌ ಪೂಜಾರಿ, ಅಂತೋನಿ ಡಿʼ ಸೋಜಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಬಳಿಕ ಅರ್ಜಿದಾರರಿಂದ ಅರ್ಜಿಯನ್ನು ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತ್‌ ಸದಸ್ಯರು, ಪಂ.ಅಭಿವೃದ್ಧಿ ಅಧಿಕಾರಿ ಪ್ರದೀಪ್‌ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Latest Posts

error: Content is protected !!