Wednesday, August 17, 2022
spot_img
Homeವಿದೇಶಪ್ರಧಾನಿ ಹುದ್ದೆ ತ್ಯಜಿಸಲು ಬೋರಿಸ್ ಜಾನ್ಸನ್ ಒಪ್ಪಿಗೆ : ಹೊಸ ನಾಯಕನ ಆಯ್ಕೆಯಾಗುವವರೆಗೆ ಇಂಗ್ಲೆಂಡ್ ಪ್ರಧಾನಿಯಾಗಿ ಮುಂದುವರಿಕೆ

ಪ್ರಧಾನಿ ಹುದ್ದೆ ತ್ಯಜಿಸಲು ಬೋರಿಸ್ ಜಾನ್ಸನ್ ಒಪ್ಪಿಗೆ : ಹೊಸ ನಾಯಕನ ಆಯ್ಕೆಯಾಗುವವರೆಗೆ ಇಂಗ್ಲೆಂಡ್ ಪ್ರಧಾನಿಯಾಗಿ ಮುಂದುವರಿಕೆ

ಲಂಡನ್: ಪ್ರಧಾನ ಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಇಂಗ್ಲೆಂಡ್ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ಒಪ್ಪಿಗೆ ಸೂಚಿಸಿದ್ದಾರೆ ಎಂದು ದಿ ಅಸೋಸಿಯೇಟೆಡ್ ಪ್ರೆಸ್ ವರದಿ ಮಾಡಿದೆ.

ತಮ್ಮ ಸಂಪುಟದ 40ಕ್ಕೂ ಹೆಚ್ಚು ಸಚಿವರು ಹುದ್ದೆಯನ್ನು ತ್ಯಜಿಸಿ ಅವರಿಗೂ ಪ್ರಧಾನಿ ಹುದ್ದೆ ತ್ಯಜಿಸುವಂತೆ ಸೂಚಿಸಿದ ನಂತರ ಬೊರಿಸ್ ಜಾನ್ಸನ್ ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ. ಕನ್ಸರ್ವೇಟಿವ್ ಪಕ್ಷ ನೂತನ ನಾಯಕನನ್ನು ಆರಿಸುವವರೆಗೆ ಬೊರಿಸ್ ಪ್ರಧಾನಿ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆಯೇ ಅಥವಾ ತಕ್ಷಣದಿಂದ ಜಾರಿಗೆ ಬರುವಂತೆ ಹುದ್ದೆ ತ್ಯಜಿಸಲಿದ್ದಾರೆಯೇ ಎಂಬುದು ಸ್ಪಷ್ಟವಾಗಿಲ್ಲ. 

ಲಂಡನ್ ನ ಡೌನಿಂಗ್ ಸ್ಟ್ರೀಟ್‌ನ ವರದಿಗಳ ಪ್ರಕಾರ, ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಗುರುವಾರ ಅಂತಿಮವಾಗಿ ಕನ್ಸರ್ವೇಟಿವ್ ಪಕ್ಷದ ನಾಯಕತ್ವದಿಂದ ಕೆಳಗಿಳಿಯಲು ಒಪ್ಪಿಕೊಂಡಿದ್ದಾರೆ. ಮುಂದಿನ ಅಕ್ಟೋಬರ್‌ನಲ್ಲಿ ನಿಗದಿಯಾಗಿರುವ ಕನ್ಸರ್ವೇಟಿವ್ ಪಕ್ಷದ ಸಮಾವೇಶದ ವೇಳೆಗೆ ಹೊಸ ನಾಯಕನನ್ನು ಆಯ್ಕೆ ಮಾಡುವ ಪ್ರಕ್ರಿಯೆಯು ಪೂರ್ಣಗೊಳ್ಳುವವರೆಗೆ 58 ವರ್ಷದ ಜಾನ್ಸನ್ ಬ್ರಿಟನ್ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ. 

ಸದ್ಯದಲ್ಲಿಯೇ ಬೊರಿಸ್ ಜಾನ್ಸನ್ ಔಪಚಾರಿಕವಾಗಿ ತಮ್ಮ ರಾಜೀನಾಮೆಯನ್ನು ಘೋಷಿಸುವ ಸಾಧ್ಯತೆಯಿದೆ. ಮೊನ್ನೆ ಮಂಗಳವಾರದಿಂದ ಅವರ ಕ್ಯಾಬಿನೆಟ್‌ನಿಂದ ಒಬ್ಬೊಬ್ಬರೇ ಸಚಿವರು ರಾಜೀನಾಮೆ ನೀಡುತ್ತಾ ಹೋದರು. ಲಂಡನ್ ನ 10 ಡೌನಿಂಗ್ ಸ್ಟ್ರೀಟ್‌ನಲ್ಲಿ ಬೊರಿಸ್ ಜಾನ್ಸನ್ ಅವರ ಸ್ಥಾನಕ್ಕೆ ಮುಂಚೂಣಿಯಲ್ಲಿರುವ ಇರಾಕಿ-ಮೂಲದ ಮಂತ್ರಿ ನಾಧಿಮ್ ಜಹಾವಿ, ಬೊರಿಸ್ ಅವರ ಅಧಿಕಾರವನ್ನು ಬಹಿರಂಗವಾಗಿ ಪ್ರಶ್ನಿಸಿ ಅವರ ನಿರ್ಗಮನಕ್ಕೆ ಒತ್ತಾಯಿಸಿ ಪತ್ರ ಬರೆದಿದ್ದಾರೆ. 

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!