Wednesday, August 17, 2022
spot_img
Homeಸ್ಥಳೀಯ ಸುದ್ದಿಕರಾವಳಿ ಭಾಗದಲ್ಲಿ ಮುಂದುವರಿದ ಧಾರಾಕಾರ ಮಳೆ : ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಿಗೆ...

ಕರಾವಳಿ ಭಾಗದಲ್ಲಿ ಮುಂದುವರಿದ ಧಾರಾಕಾರ ಮಳೆ : ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜುಲೈ 9 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂದಿನ 48 ಗಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಅಲ್ಲದೆ ಕರಾವಳಿ ಭಾಗದಲ್ಲಿ ಭಾರೀ ಗಾಳಿ ಬೀಸಲಿದ್ದು, ಮಂಗಳೂರಿನಿಂದ ಕಾರವಾರ ಸಮುದ್ರದವರೆಗೆ ಭಾರಿ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಮೂಡಬಿದರೆಯಲ್ಲಿ ಅತಿಹೆಚ್ಚು ಮಳೆ ನಂತರ ಬೆಳ್ತಂಗಡಿ ತಾಲ್ಲೂಕಿನಲ್ಲಿ ಸಾಕಷ್ಟು ಮಳೆಯಾಗಿದೆ. ನೇತ್ರಾವತಿ ನದಿ ನೀರಿನ ಮಟ್ಟ ಅಪಾಯದ ಮಟ್ಟ ದಾಟಿದೆ.

ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ. ಈ ಮೂರು ಜಿಲ್ಲೆಗಳಲ್ಲಿ 204 ಮಿಲಿ ಮೀಟರ್ ಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿರಿಯಂಗಡಿ : ಮನೆಗೆ ನುಗ್ಗಿದ ನೀರು

ಅಜೆಕಾರಿನಲ್ಲಿ ಗರಿಷ್ಠ ಮಳೆ

ಕಾರ್ಕಳ : ಧಾರಾಕಾರ ಮಳೆಗೆ ಹಿರಿಯಂಗಡಿ ರಸ್ತೆಯ ಇಕ್ಕೆಲದ ಚರಂಡಿಯಲ್ಲಿ ನೀರು ಸರಾಗವಾಗಿ ಹರಿದು ಹೋಗದ ಪರಿಣಾಮ ವಸಂತ ಭಂಗ ಎಂಬವರ ಮನೆಗೆ ನೀರು ನುಗ್ಗಿದೆ. ಇದರಿಂದ ಕುಟುಂಬಕ್ಕೆ ಬಹಳ ತೊಂದೆಯಾಗಿದೆ. ಗುರುವಾರ ಕಾರ್ಕಳ, ಹೆಬ್ರಿ ತಾಲೂಕಿನಾದ್ಯಂತ ಭಾರಿ ಮಳೆಯಾಗಿದ್ದು, ಅಜೆಕಾರಿನಲ್ಲಿ ಗರಿಷ್ಠ ಅಂದರೆ 126. 2 ಮಿ.ಮೀ. ಮಳೆಯಾಗಿದೆ. ಕೆದಿಂಜೆಯಲ್ಲಿ 74. 4 ಮಿ.ಮೀ., ಅಜೆಕಾರು 126. 2 ಮಿ.ಮೀ., ಕಾರ್ಕಳ 98. 4 ಮಿ.ಮೀ., ಸಾಣೂರು 106. 8 ಮಿ.ಮೀ., ಇರ್ವತ್ತೂರು 105.2 ಮಿ.ಮೀ. ಮುಳಿಕಾರು 125.6 ಮಿ.ಮೀ. ಮಳೆಯಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!