ಎಲೆಕ್ಟ್ರಾನಿಕ್ ಸಿಟಿ ರಾಬರಿ ಪ್ರಕರಣ : ರಾಜಸ್ಥಾನದವರೆಗೂ ದರೋಡೆಕೋರರ ಅಟ್ಟಾಡಿಸಿ ಬಂಧಿಸಿದ ಬೆಂಗಳೂರು ಪೊಲೀಸರು

ಜೈಪುರ : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಂಟಿ ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು ರಾಜಸ್ಥಾನದವರೆಗೂ ದರೋಡೆಕೋರರನ್ನು ಬೆನ್ನಟ್ಟಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದರೋಡೆಕೋರರನ್ನು ರಾಜಸ್ಥಾನದಲ್ಲಿ ಸಿನಿಮೀಯ ಶೈಲಿಯಲ್ಲಿ ಪೊಲೀಸರು ಚೇಸಿಂಗ್ ಮಾಡಿ ಬಂಧಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಜು.4 ರಂದು ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುವೆಲ್ಲರಿ ಶಾಪ್ ಮಾಲೀಕರೊಬ್ಬರಿಗೆ ಗನ್ ತೋರಿಸಿ ಕೈ ಕಾಲು ಕಟ್ಟಿ ಹಾಕಿ ಚಿನ್ನ, ಬೆಳ್ಳಿ ಮತ್ತು ನಗದು ದೋಚಿ ಖತರ್ನಾಕ್ ದರೋಡೆಕೋರರ ತಂಡವೊಂದು ಎಸ್ಕೇಪ್ ಆಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿದ್ದ ಬೆಂಗಳೂರು ಪೊಲೀಸರು ಆರೋಪಿಗಳು ಎಸ್ಕೇಪ್ ಆಗಿದ್ದ ಕಾರಿನ ಜಾಡು ಹಿಡಿದು ತನಿಖೆ ಮುಂದುವರೆಸಿದ್ದರು. ಈ ವೇಳೆ ದರೋಡೆಗೆ ಬಳಸಿದ್ದ ಕಾರು ರಾಜಸ್ಥಾನದಲ್ಲಿ ಇರುವುದು ಪತ್ತೆಯಾಗಿತ್ತು. ಕೂಡಲೇ ಕಾರ್ಯ ಪ್ರವೃತ್ತರಾದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರ ತಂಡವೊಂದು ರಾಜಸ್ಥಾನಕ್ಕೆ ತೆರಳಿ ಆರೋಪಿಗಳ ಪತ್ತೆಗಾಗಿ ಕಾರ್ಯಾಚರಣೆಗೆ ಇಳಿದಿತ್ತು. ರಾಜಸ್ಥಾನಕ್ಕೆ ತೆರಳಿದ ಬಳಿಕ ಅಲ್ಲಿನ ಪೊಲೀಸರಿಗೆ ಈ ಬಗ್ಗೆ ಬೆಂಗಳೂರು ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ಇದೇ ಗ್ಯಾಂಗ್ ರಾಜಸ್ಥಾನದ ಉದಯಪುರದ ಪೊಲೀಸರಿಗೂ ಚಳ್ಳೆ ಹಣ್ಣು ತಿನ್ನಿಸಿ ಎಸ್ಕೇಪ್ ಆಗಿತ್ತು ಎಂಬ ಅಂಶ ಬಯಲಿಗೆ ಬಂದಿದೆ. ರಾಜಸ್ಥಾನ ಮತ್ತು ಬೆಂಗಳೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಉದಯಪುರದಲ್ಲಿ ಈ ಗ್ಯಾಂಗ್ ಇರುವ ಮಾಹಿತಿ ಲಭ್ಯವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.





























































































































































































































error: Content is protected !!
Scroll to Top