ಚೆನ್ನೈ: ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ಗೆ ಹೃದಯಾಘಾತವಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆಸ್ಪತ್ರೆಯ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಮಣಿರತ್ನಂ ನಿರ್ದೇಶನದ ಪೊನ್ನಿಯಿನ್ ಸೆಲ್ವನ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಟೀಸರ್ ಇಂದು ಸಂಜೆ ಬಿಡುಗಡೆಯಾಗಬೇಕಿತ್ತು.
ತಮ್ಮ ನೆಚ್ಚಿನ ನಟ ಶೀಘ್ರ ಗುಣಮುಖವಾಗಲೆಂದು ಅಭಿಮಾನಿಗಳು ಹಾರೈಸುತ್ತಿದ್ದಾರೆ.