Saturday, October 1, 2022
spot_img
Homeಸುದ್ದಿಶ್ರೀಲಂಕಾ ಪ್ರಧಾನಿ ರನಿಲ್‌ ವಿಕ್ರಮ ಸಿಂಘೆ ರಾಜೀನಾಮೆ

ಶ್ರೀಲಂಕಾ ಪ್ರಧಾನಿ ರನಿಲ್‌ ವಿಕ್ರಮ ಸಿಂಘೆ ರಾಜೀನಾಮೆ

ಕೊಲಂಬೋ : ಶ್ರೀಲಂಕಾ ಆರ್ಥಿಕ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದ್ದು, ಅಧ್ಯಕ್ಷ ಗೋಟಾಬಯ ರಾಜಪಕ್ಷೆ ವಿರುದ್ಧದ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆಯೇ ಲಂಕಾ ಪ್ರಧಾನಿ ರನಿಲ್ ವಿಕ್ರಮ ಸಿಂಘೆ ರಾಜೀನಾಮೆ ನೀಡಿದ್ದಾರೆ. ರಾಜಕೀಯ ಪರಿಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಮತ್ತು ಎಲ್ಲ ಪಕ್ಷಗಳ ಸರಕಾರ ರಚನೆಗೆ ದಾರಿಮಾಡಿಕೊಡುವ ನಿಟ್ಟಿನಲ್ಲಿ ತಾವು ರಾಜೀನಾಮೆ ನೀಡುತ್ತಿರುವುದಾಗಿ ವಿಕ್ರಮ ಸಿಂಘೆ ತಿಳಿಸಿದ್ದಾರೆ. ಇದಕ್ಕೂ ಮುನ್ನ ಶ್ರೀಲಂಕಾದ ರಾಜಕೀಯ ಬಿಕ್ಕಟ್ಟನ್ನು ಬಗೆಹರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಂಸತ್ ಸ್ಪೀಕರ್ ಸಭೆಗೂ ಮುನ್ನ ವಿಕ್ರಮ ಸಿಂಘೆ ಕೆಲವು ಪಕ್ಷದ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದರು.

LEAVE A REPLY

Please enter your comment!
Please enter your name here

Most Popular

error: Content is protected !!