Sunday, October 2, 2022
spot_img
Homeಸುದ್ದಿಶಾಲಾ ಮಕ್ಕಳ ಶೂ, ಸಾಕ್ಸ್‌ಗೆ 132 ಕೋ.ರೂ. ಬಿಡುಗಡೆ

ಶಾಲಾ ಮಕ್ಕಳ ಶೂ, ಸಾಕ್ಸ್‌ಗೆ 132 ಕೋ.ರೂ. ಬಿಡುಗಡೆ

ಬೆಂಗಳೂರು: ಮಕ್ಕಳು ಶಾಲೆಗೆ ಹೋಗುವುದು ಶೂ ಮತ್ತು ಸಾಕ್ಸ್‌ಗಲ್ಲ ಎಂಬ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರ ಬೇಜವಾಬ್ದಾರಿ ಹೇಳಿಕೆ ವಿವಾದಕ್ಕೊಳಗಾಗಿ ತೀವ್ರ ಮುಜುಗರ ಅನುಭವಿಸಿದ್ದ ಸರಕಾರ ಇದೀಗ ಶಾಲಾ ಮಕ್ಕಳ ಶೂ ಮತ್ತು ಸಾಕ್ಸ್‌ ಖರೀದಿಗಾಗಿ 132 ಕೋ.ರೂ. ಬಿಡುಗಡೆಗೊಳಿಸಿದೆ. ತರಗತಿಗಳು ಆರಂಭವಾಗಿ ಏಳು ವಾರಗಳು ಕಳೆದಿದ್ದರೂ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಗಳನ್ನು ವಿತರಿಸದೆ ಟೀಕೆಗಳಿಗೆ ಗುರಿಯಾಗಿತ್ತು.
ಮಕ್ಕಳಿಗೆ ಶೂ ಮತ್ತು ಸಾಕ್ಸ್ ಗಳನ್ನು ವಿತರಿಸಲು ರೂ. 132 ಕೋಟಿ ಮಂಜೂರು ಮಾಡಲಾಗಿದೆ. ಸರ್ಕಾರ ಈಗಾಗಲೇ ಸಮವಸ್ತ್ರಕ್ಕೆ ಹಣ ಮಂಜೂರು ಮಾಡಿದೆ. ಆದರೆ ಅವು ಸಿದ್ಧವಾಗಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ, ಅವುಗಳನ್ನು ನಂತರ ವಿತರಿಸಲಾಗುವುದು ಯಾವುದೇ ಗೊಂದಲದ ಅಗತ್ಯವಿಲ್ಲ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸರ್ಕಾರಿ ಶಾಲಾ ಮಕ್ಕಳಿಗೆ ಅಗತ್ಯ ಪರಿಕರಗಳನ್ನು ಪೂರೈಸಲು ಸರಕಾರ ಕ್ರಮ ಕೈಗೊಂಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ವಾಗ್ದಾಳಿ ನಡೆಸಿದ ಎರಡು ದಿನಗಳ ನಂತರ ಈ ಆದೇಶ ಬಂದಿದೆ. ಈ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡಾ ವಿರುದ್ಧ ವಾಗ್ದಾಳಿ ನಡೆಸಿದ್ದರು.

LEAVE A REPLY

Please enter your comment!
Please enter your name here

Most Popular

error: Content is protected !!