Wednesday, August 17, 2022
spot_img
Homeರಾಜ್ಯಜು.11 : ಕಬ್ಬಿನ ಹಳೆಬಾಕಿ ಹಾಗೂ ಹಲವು ಬೇಡಿಕೆಗಾಗಿ ಸಿಎಂ ನಿವಾಸಕ್ಕೆ ಮುತ್ತಿಗೆ

ಜು.11 : ಕಬ್ಬಿನ ಹಳೆಬಾಕಿ ಹಾಗೂ ಹಲವು ಬೇಡಿಕೆಗಾಗಿ ಸಿಎಂ ನಿವಾಸಕ್ಕೆ ಮುತ್ತಿಗೆ

ಬೆಂಗಳೂರು : ಕಬ್ಬಿನ ಹಳೆಬಾಕಿ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜು.11 ರಂದು ಕರ್ನಾಟಕ ರಾಜ್ಯ ರೈತ ಸಂಘವು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕುವುದಾಗಿ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು ನಾಳೆ ಬೆಳಿಗ್ಗೆ 11 ಗಂಟೆಗೆ ಸಿಟಿ ರೈಲ್ವೆ ನಿಲ್ದಾಣದಿಂದ ರೈತ ಸಂಘದ ನೂರಾರು ಕಾರ್ಯಕರ್ತರು ಮೆರವಣಿಗೆ ಹೊರಟು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದಾರೆ.

ರಾಜ್ಯದಲ್ಲಿ ಕಬ್ಬಿನ ಕಾರ್ಖಾನೆಯ ಮಾಲೀಕರು ವಿವಿಧ ರಾಜಕೀಯ ಪಕ್ಷಗಳ ಮುಖಂಡರಾಗಿದ್ದಾರೆ. ನೂರಾರು ರೈತರಿಗೆ ಬಾಕಿ ನೀಡದೆ ಕಾಲಹರಣ ಮಾಡುತ್ತಿದ್ದಾರೆ. ಎಫ್.ಆರ್.ಪಿ ಬೆಲೆಗಿಂತಲೂ ಕಡಿಮೆ ಬೆಲೆಗೆ ರೈತರಿಂದ ಕಬ್ಬು ಖರೀದಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂಬಂಧ ಸರಕಾರವು ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಿದೆ. ಕಬ್ಬು ಬೆಳೆಗಾರರು ಬೆಲೆಯಲ್ಲಿ ಮೋಸ, ತೂಕದಲ್ಲಿ ವಂಚನೆ, ಬಾಕಿ ಪಾವತಿಯಲ್ಲಿ ವಿಳಂಬ ಸೇರಿದಂತೆ ಹಲವಾರು ಸಂಕಷ್ಟಗಳನ್ನು ರೈತರು ಎದುರಿಸುತ್ತಿದ್ದಾರೆ. ಕಬ್ಬು ಬೆಳೆಗಾರರಿಗೆ ನ್ಯಾಯ ಸಿಗುವ ತನಕ ಹೋರಾಟ ನಡೆಸುತ್ತೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!