ಉಡುಪಿ : ನಿರಂತರ ಸುರಿಯುತ್ತಿರುವ ಭಾರೀ ಗಾಳಿ ಮಳೆಯ ಮಧ್ಯೆಯೂ ಉಡುಪಿ ಜಿಲ್ಲೆಯಾದ್ಯಂತ ಭಾನುವಾರ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಶ್ರದ್ಧಾ ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಿದರು. ಮುಸ್ಲಿಂ ಬಾಂಧವರು ಬೆಳಗ್ಗೆ ತಮ್ಮ ವ್ಯಾಪ್ತಿಯಲ್ಲಿರುವ ಮಸೀದಿಗಳಿಗೆ ತೆರಳಿ ವಿಶೇಷ ನಮಾಜ್ ನಿರ್ವಹಿಸಿದರು. ಉಡುಪಿ ಜಾಮೀಯಾ ಮಸೀದಿಯಲ್ಲಿ ಮೌಲಾನ ಅಬ್ದುರ ರಶೀದ್ ನದ್ವಿ, ಕಾರ್ಕಳ ಜಾಮೀಯ ಮಸೀದಿಯ ಮೌಲಾನ ಜಾಹಿರ್ ಅಹ್ಮದ್ ಅಲ್ಕಾಸ್ಮಿ ಹಾಗೂ ಬಂಗ್ಲೆಗುಡ್ಡೆ ಸಲ್ಮಾನ್ ಜುಮ್ಮಾ ಮಸೀದಿಯ ಮೌಲಾನ ಅಹ್ಮದ್ ಶರೀಫ್ ಸೌದ್ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತು.
Recent Comments
ಕಗ್ಗದ ಸಂದೇಶ
on