Friday, August 19, 2022
spot_img
Homeರಾಜ್ಯಮಳೆ ಹಾನಿ : ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ನಡೆಸಲಿರುವ ಬೊಮ್ಮಾಯಿ

ಮಳೆ ಹಾನಿ : ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ನಡೆಸಲಿರುವ ಬೊಮ್ಮಾಯಿ

ಬೆಂಗಳೂರು: ರಾಜ್ಯದ ದಕ್ಷಿಣ ಕನ್ನಡ, ಕೊಡಗು, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ, ಹಾಸನ ಸೇರಿದಂತೆ 10 ಜಿಲ್ಲೆಗಳಲ್ಲಿ  ಮಹಾಮಳೆಯಾಗುತ್ತಿದ್ದು, ಅತಿ ಹೆಚ್ಚಿನ ಹಾನಿಯುಂಟಾಗಿರುವ ಜಿಲ್ಲೆಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸ್ವತಃ ಭೇಟಿ ನೀಡಲಿದ್ದಾರೆ. 

ಭಾರೀ ಮಳೆಯಿಂದ ಜಿಲ್ಲೆಗಳು ತತ್ತರಿಸಿ ಹೋಗಿರುವ ಕೊಡಗು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಸಿಎಂ ಬೊಮ್ಮಾಯಿ ನಾಳೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಉತ್ತರ ಕನ್ನಡ ಜಿಲ್ಲೆಗೂ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದಾರೆ.

ರಾಜ್ಯದ 10 ಜಿಲ್ಲೆಗಳಲ್ಲಿ ಮಹಾ ಮಳೆ ಕಾಡುತ್ತಿದ್ದು, ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​ ನೀಡಿದೆ. 6 ಜಿಲ್ಲೆಗಳಲ್ಲಿ ಆರೆಂಜ್​​ ಅಲರ್ಟ್​ ಘೋಷಣೆ ಮಾಡಿ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. 

ಮೀನುಗಾರರಿಗೆ ಎಚ್ಚರಿಕೆ

ರಾಜ್ಯದ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಬಿರುಗಾಳಿಯ ವೇಗ ಪ್ರತಿ ಗಂಟೆಗೆ 45 ರಿಂದ 55 ಕಿಲೋಮೀಟರ್ ಇರಲಿದ್ದು, 65 ಕಿಲೋಮೀಟರ್ ತಲುಪುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ರೆಡ್ ಅಲರ್ಟ್ ಘೋಷಣೆ

ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಳೆಯ ಆರ್ಭಟ ಮತ್ತೆ ಮುಂದುವರೆದಿದೆ. ಹೀಗಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು, ಅಪಾರ ಪ್ರಮಾಣದ ಆಸ್ತಿಪಾಸ್ತಿಗೆ ಹಾನಿಯಾಗಿದೆ. ಕರಾವಳಿಯಲ್ಲಿ  ಇಂದು ಸಹ  ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದ್ದು, ‘ರೆಡ್ ಅಲರ್ಟ್’ ಘೋಷಿಸಿದೆ. 

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!