Saturday, October 1, 2022
spot_img
Homeಸುದ್ದಿಜು. 12 : ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

ಜು. 12 : ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

ಉಡುಪಿ : ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಪ್ರಸ್ತುತ ಜಿಲ್ಲೆಯಲ್ಲಿ ಮಾನ್ಸೂನ್ ಸ್ಥಿತಿಗತಿಯ ಆಧಾರದಲ್ಲಿ ಹವಾಮಾನ ಇಲಾಖೆಯಿಂದ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆಯಾಗಿರುತ್ತದೆ. ಉಪನಿರ್ದೇಶಕರು, ತಾಲೂಕು ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪಡೆದ ವರದಿಯನ್ನು ಪರಿಗಣಿಸಿ ಜು. 12ರಂದು ಜಿಲ್ಲೆಯ ಯಾವುದೇ ತಾಲೂಕಿನಲ್ಲಿ ಅಂಗನವಾಡಿ, ಶಾಲಾ-ಕಾಲೇಜು ಮೊದಲಾದ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಿರುವುದಿಲ್ಲ.

ನಿಯಮ ಇಂತಿದೆ
ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯ ಮಾಡುವಂತಿಲ್ಲ. ಕಠಿಣವಾದ ದಾರಿ ಎಂದರೆ ನೋಡು ಹಳ್ಳಗಳನ್ನು ದಾಟಿ ಬರುವ ಸಂದರ್ಭಗಳು ಇರುವಂತಹ ವಿದ್ಯಾರ್ಥಿಗಳಿಗೆ ಮನೆಯಲ್ಲಿಯೇ ಸುರಕ್ಷಿತವಾಗಿ ಇರುವಂತೆ ಸೂಚಿಸಲು ತಿಳಿಸಲಾಗಿದೆ. ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ನೆರೆ ಪೀಡಿತರಾಗಿದ್ದು ಶಾಲೆಗೆ ಬರುವುದು ಕಷ್ಟಸಾಧ್ಯ ಸಂದರ್ಭಗಳಲ್ಲಿ ಸ್ಥಳೀಯವಾಗಿ ರಜೆ ಘೋಷಿಸಲು ಅವಕಾಶ ನೀಡಲಾಗಿದೆ. ರಜೆ ನೀಡಿ ಉಂಟಾಗಿರುವ ಕಲಿಕಾ ಸಮಯವನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿ ನಡೆಸಿ ನಷ್ಟ ಸರಿದೂಗಿಸಬಹುದಾಗಿದೆ. ಶಾಲಾ, ಕಾಲೇಜುಗಳ ಆವರಣದಲ್ಲಿ ಅಪಾಯಕಾರಿ ಮರವಿದ್ದಲ್ಲಿ ಸಂಬಂಧಪಟ್ಟ ಇಲಾಖೆಯವರ ಗಮನಕ್ಕೆ ತಂದು ಅಂತಹ ಮರಗಳನ್ನು ತೆರವುಗೊಳಿಸಲು ಅಗತ್ಯ ಕ್ರಮವಹಿಸುವಂತೆ ಜಿಲ್ಲಾಡಳಿತ ತಿಳಿಸಿದೆ.

ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ ಕಂಟ್ರೋಲ್‌ ರೂಂ 1077/ 0820-2574802 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

Most Popular

error: Content is protected !!