ಹೊಸದಿಲ್ಲಿ: ಭಾರತದ ಬ್ಯಾಂಕ್ಗಳಿಗೆ ಕೋಟಿಗಟ್ಟಲೆ ರೂಪಾಯಿ ವಂಚಿಸಿ ಇಂಗ್ಲೆಂಡ್ನಲ್ಲಿ ಆಶ್ರಯಪಡೆದಿರುವ ಮದ್ಯದ ದೊರೆ ವಿಜಯ್ ಮಲ್ಯಗೆ ಇಂದು ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆ ಆರೋಪದಡಿ ನಾಲ್ಕು ತಿಂಗಳ ಜೈಲು ಶಿಕ್ಷೆ ಹಾಗೂ 2,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ನ್ಯಾಯಮೂರ್ತಿಗಳಾದ ಯು. ಯು. ಲಲಿತ್, ಎಸ್. ರವೀಂದ್ರ ಭಟ್ ಮತ್ತು ಪಿ. ಎಸ್. ನರಸಿಂಹ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ನ ತ್ರಿಸದಸ್ಯ ಪೀಠ ಕಳೆದ ಮಾರ್ಚ್ 10ರಂದು ಪ್ರಕರಣ ವಿಚಾರಣೆ ನಡೆಸಿದ್ದು, ಮಲ್ಯ ವಿರುದ್ಧದ ಪ್ರಕರಣದ ಅಂತಿಮ ಆದೇಶವನ್ನು ಕಾಯ್ದಿರಿಸಿತ್ತು. ಪ್ರಕರಣ ಸಂಬಂಧ ವಿವಿಧ ಅಂಶಗಳ ಕುರಿತು ಹಿರಿಯ ವಕೀಲ ಜೈದೀಪ್ ಗುಪ್ತಾ ಅವರ ವಾದವನ್ನು ನ್ಯಾಯಾಲಯ ಆಲಿಸಿತು. ಬಳಿಕ ಮಲ್ಯ ಅವರನ್ನು ಪ್ರತಿನಿಧಿಸುತ್ತಿದ್ದ ವಕೀಲರಿಗೆ ಮಾರ್ಚ್ 15ರೊಳಗೆ ಲಿಖಿತ ಸಲ್ಲಿಕೆಗಳನ್ನು ಸಲ್ಲಿಸಲು ಅನುಮತಿ ನೀಡಲು ಸುಪ್ರೀಂ ಕೋರ್ಟ್ ನಿರ್ಧರಿಸಿದೆ.
ಯುನೈಟೆಡ್ ಕಿಂಗ್ಡಂನಲ್ಲಿರುವ ತಮ್ಮ ಕಕ್ಷಿದಾರ(ಮಲ್ಯ) ರಿಂದ ಯಾವುದೇ ಸೂಚನೆಯನ್ನು ಪಡೆಯದೆ ನ್ಯಾಯಾಲಯದಲ್ಲಿ ವಾದಿಸಲು ಸಾಧ್ಯವಾಗುವುದಿಲ್ಲ ಎಂದು ಮಲ್ಯ ಪರ ವಕೀಲರು ಕಳೆದ ಮಾರ್ಚ್ 10ರಂದು ನಡೆದ ವಿಚಾರಣೆ ವೇಳೆ ಪೀಠಕ್ಕೆ ತಿಳಿಸಿದ್ದರು. ಮಲ್ಯಗೆ ವೈಯಕ್ತಿಕವಾಗಿ ಅಥವಾ ವಕೀಲರ ಮೂಲಕ ಹಾಜರಾಗಲು ಹಲವು ಅವಕಾಶಗಳನ್ನು ನೀಡಿರುವುದಾಗಿ ಈ ಹಿಂದೆ ಸುಪ್ರೀಂ ಕೋರ್ಟ್ ಹೇಳಿತ್ತು. ಕಳೆದ ವರ್ಷ ನವೆಂಬರ್ 30ರಂದು ಈ ಬಗ್ಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಿತ್ತು. ಆದರೂ ಮಲ್ಯ ಮಾತ್ರ ಇದುವರೆಗೆ ಖುದ್ದಾಗಿ ಹಾಜರಾಗಿಲ್ಲ.
ಏನಿದು ಪ್ರಕರಣ?
ವಿಜಯ್ ಮಲ್ಯಗೆ ಸ್ಟೇಟ್ ಬ್ಯಾಂಕ್ ಸೇರಿದಂತೆ ವಿವಿಧ ಬ್ಯಾಂಕ್ಗಳು ಸಾವಿರಾರು ಕೋಟಿ ರೂಪಾಯಿ ಸಾಲ ನೀಡಿತ್ತು. ಇದರ ಮರುಪಾವತಿ ಮಾಡದೆ ಇಂಗ್ಲೆಂಡ್ಗೆ ಹಾರಿರುವ ಮಲ್ಯ, ಬ್ಯಾಂಕ್ಗಳಿಗೆ ಪಂಗನಾಮ ಹಾಕಿದ್ದಾರೆ ಎಂದು ವಿವಿಧ ಬ್ಯಾಂಕ್ಗಳು ಆರೋಪಿಸಿದ್ದವು. ಈ ಸಂಬಂಧ ನ್ಯಾಯಾಲಯದ ಮೆಟ್ಟಿಲೇರಿದ ಬ್ಯಾಂಕ್ಗಳ ಒಕ್ಕೂಟದ ಪರ ಕೋರ್ಟ್ ತೀರ್ಪು ನೀಡಿತ್ತು. ಆದರೆ ಸುಮಾರು 9,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಸಾಲ ಮರುಪಾವತಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶಗಳನ್ನು ವಿಜಯ್ ಮಲ್ಯ ಪಾಲಿಸುತ್ತಿಲ್ಲ ಎಂದು ಆರೋಪಿಸಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಬ್ಯಾಂಕ್ಗಳ ಒಕ್ಕೂಟವು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.
ಮಲ್ಯ ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸುತ್ತಿಲ್ಲ. ಅಲ್ಲದೆ ನಿರ್ಬಂಧದ ಆದೇಶಗಳನ್ನು ಉಲ್ಲಂಘಿಸಿ ತಮ್ಮ ಮಕ್ಕಳಿಗೆ ಆಸ್ತಿ ಅಥವಾ ಹಣವನ್ನು ವರ್ಗಾಯಿಸುತ್ತಿದ್ದಾರೆ ಎಂದು ಬ್ಯಾಂಕ್ಗಳು ಆರೋಪಿಸಿವೆ.
2017ರಲ್ಲಿ ಮಲ್ಯ ಅವರನ್ನು ತಪ್ಪಿತಸ್ಥ ಎಂದು ಪರಿಗಣಿಸಲಾಗಿತ್ತು. ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ತನ್ನ ಮಕ್ಕಳಿಗೆ 40 ಮಿಲಿಯನ್ ಅಮೆರಿಕನ್ ಡಾಲರ್ ವರ್ಗಾವಣೆ ಮಾಡಿದ್ದಕ್ಕಾಗಿ 2017ರಲ್ಲಿ ಮಲ್ಯರನ್ನು ತಪ್ಪಿತಸ್ಥ ಎಂದು ಕೋರ್ಟ್ ಘೋಷಿಸಿತ್ತು. ಆ ಬೆನ್ನಲ್ಲೇ ನ್ಯಾಯಾಲಯ ನೀಡಿದ ತೀರ್ಪನ್ನು ಮೇಲ್ವಿಚಾರಣೆ ನಡೆಸುವಂತೆ ಮಲ್ಯ ಮೇಲ್ಮನವಿ ಸಲ್ಲಿಸಿದ್ದರು. ಆದರೆ ಈ ಅರ್ಜಿಯನ್ನು ಕೂಡಾ 2020ರಲ್ಲಿ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.
ಮದ್ಯದ ದೊರೆ ವಿಜಯ್ ಮಲ್ಯಗೆ 4 ತಿಂಗಳು ಜೈಲು , 2 ಸಾವಿರ ದಂಡ
Recent Comments
ಕಗ್ಗದ ಸಂದೇಶ
on